ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಬಿಜೆಪಿ 157 ಸ್ಥಾನದಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಭೂತ ಪೂರ್ವ ಜಯ ಸಾಧಿಸಿದೆ.
ಈ ಕುರಿತು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಭೂತಪೂರ್ವ ಚುನಾವಣಾ ಫಲಿತಾಂಶ ದಿಂದ ಸಂತಸದಿಂದಿದ್ದೇನೆ. ಅಭಿವೃದ್ದಿ ರಾಜಕಾರಣಕ್ಕೆ ಗುಜರಾತಿಗಳಿಂದ ಆಶೀರ್ವಾದ ಸಿಕ್ಕಿದೆ. ಗುಜರಾತ್ ನಲ್ಲಿ ಮತ್ತಷ್ಟು ಅಭಿವೃದ್ದಿ ವೇಗ ನೀಡಬೇಕೆಂಬ ಬಯಕೆ ಇದೆ. ಗುಜರಾತ್ ಜನಶಕ್ತಿಗೆ ನಾನು ತಲೆ ಬಾಗುತ್ತೇನೆ ಎಂದಿದ್ದಾರೆ.
ಪ್ರಚಂಡ ಜಯಕ್ಕೆ ಕಾರಣಕರ್ತರಾದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇನೆ. ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ. ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಗೆಲುವು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy