ಗುಜರಾತ್ನ ವಲ್ಸಾದ್ ಜಿಲ್ಲೆಯ ಪೆಟ್ರೋಕೆಮಿಕಲ್ ಕಂಪನಿಯಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಸಂಭವಿಸಿದ ಭಾರೀ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವೇಳೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಸರಿಗಮ್ ಜಿಐಡಿಸಿಯ ಪೆಟ್ರೋಕೆಮಿಕಲ್ ಕಂಪನಿಯಲ್ಲಿ ಸ್ಫೋಟದ ನಂತರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸತ್ತವರನ್ನು ಇನ್ನೂ ಗುರುತಿಸಲಾಗಿಲ್ಲ ಮತ್ತು ಸ್ಫೋಟದ ಕಾರಣ ತಿಳಿದುಬಂದಿಲ್ಲ. ”- ವಲ್ಸಾದ್ ಎಸ್ಪಿ ವಿಜಯ್ ಸಿಂಗ್ ಗುರ್ಜರ್ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50s


