ತುರುವೇಕೆರೆ: ಜಯ ಕರ್ನಾಟಕ ಜನಪರ ವೇದಿಕೆಯ ಐ ಕೇರ್ ಬ್ರಿಗೇಡ್ ಸಂಸ್ಥೆಯ ಯುವ ಸಂಸ್ಥಾಪಕರಾದ ಪಿ.ಗುಣ ರಂಜನ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಭೂಗತ ಪ್ರಪಂಚದ ಕೆಲ ವ್ಯಕ್ತಿಗಳ ತಂಡವೊಂದು ಸಂಚು ರೂಪಿಸಿದೆ. ಆದ್ದರಿಂದ ಗೃಹ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಹತ್ಯೆಯ ಸಂಚು ರೂಪಿಸಿರುವ ತಂಡವನ್ನು ಪತ್ತೆಮಾಡಿ ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷರಾದ ವೆಂಕಟೇಶ್ ಒತ್ತಾಯಿಸಿದರು.
ಪಟ್ಟಣದಲ್ಲಿ ನಡೆಸಲಾದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಐಟಿಯು ಮುಖಂಡ ಸತೀಶ್, ಪ್ರಗತಿಪರರನ್ನು ನಾಡು ನುಡಿ ಜಲದ ಬಗ್ಗೆ ಹೋರಾಟ ಮಾಡುತ್ತಿರುವ ಹೋರಾಟಗಾರರನ್ನೇ ಗುರಿಮಾಡಿಕೊಂಡು ಹತ್ಯೆಗೆ ಮುಂದಾಗಿರುವುದು ಖಂಡನೀಯ ಎಂದರು.
ಗ್ರೇಡ್ 2 ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಇದೇ ವೇಳೆ ಮನವಿ ಸಲ್ಲಿಸಲಾಯಿತು. ಈ ಪ್ರತಿಭಟನೆಯಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ , ಬೀದಿ ಬದಿ ವ್ಯಾಪಾರಿ ಸಂಘದ ಅಧ್ಯಕ್ಷರಾದ ಮಾರುತಿ ,ಕಟ್ಟಡ ಕಾರ್ಮಿಕರ ಸಂಘಟನೆಯ ಕಾರ್ಯದರ್ಶಿ ಮಂಜುನಾಥ್ , ಮಾಲಾಶ್ರೀ , ವೇದ, ಪೂರ್ಣಿಮಾ, ಜ್ಯೋತಿ, ಕಂಚಿರಾಯ ಮುಂತಾದವರು ಭಾಗವಹಿಸಿದ್ದರು
ವರದಿ: ಸುರೇಶ್ ಬಾಬು , ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB