ಮಧುಗಿರಿ: ಗ್ರಾಮೀಣ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.
ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ವೀರಪುರ ಗ್ರಾಮದಲ್ಲಿ ಸುಮಾರು 3 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ಜನರ ಬಹು ದಿನದ ಬೇಡಿಕೆಯಂತೆ ಉತ್ತಮ ರಸ್ತೆ ನಿರ್ಮಾಣವಾಗುತ್ತಿದ್ದು, ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಅವಶ್ಯಕತೆಗೆ ಅನುಗುಣವಾಗಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಗುತ್ತಿಗೆದಾರರು ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕು ಹಾಗೂ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ವೀರಾಪುರ ಗ್ರಾಮದಲ್ಲಿ ಏಪ್ರಿಲ್ ನಂತರ ಶುದ್ದ ನೀರಿನ ಘಟಕ ಸ್ಥಾಪನೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ವಿರಭದ್ರಪ್ಪ, ಪಿಡಿಒ ಆನಂದ್, ಇಇ ಗಂಗಾಧರ್, ಗುತ್ತಿಗೆದಾರ ರಾಜೇಂದ್ರ, ಲೋಕೇಶ್ ರೆಡ್ಡಿ, ಸಿದ್ದಾರೆಡ್ಡಿ, ಜಯದೇವಪ್ಪ ಹಾಗೂ ಮುಂತಾದವರು ಇದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB