ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಈಗ ಮೈಸೂರಿನ ಬಿಜೆಪಿ ಶಾಸಕ ಹಾಗೂ ಸಂಸದರ ನಡುವೆ ಡೈರೆಕ್ಟ್ ಫೈಟ್ ಆಗಿದೆ. ಸಂಸದರು ಒಡೆಯುತ್ತೀನಿ ಎಂದ ಮೇಲೆ ಕಳಶ ನಿರ್ಮಿಸಿಲ್ಲ. ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ, ಪ್ರತಾಪ್ ಸಿಂಹ ಹೇಳಿರುವಂತೆ ರಾತ್ರೋರಾತ್ರಿ ಕಳಸ ನಿರ್ಮಾಣ ಮಾಡಿಲ್ಲ, ಯಾವುದೇ ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ ನಿರ್ಮಿಸಿಲ್ಲ ಎಂದು ಶಾಸಕ ರಾಮದಾಸ್ ಗೂಗಲ್ ಫೋಟೊ ರಿಲೀಸ್ ಮಾಡಿದ್ದಾರೆ.
ಮೈಸೂರಿನ ಬಸ್ ನಿಲ್ದಾಣಗಳು ಮುಸ್ಲಿಂ ಶೈಲಿಯ ಗುಂಬಜ್ಗಳ ಮಾದರಿಯಲ್ಲಿ ನಿರ್ಮಾಣಗೊಂಡಿವೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ರಾಮದಾಸ್ ತಿರುಗೇಟು ನೀಡಿದ್ದಾರೆ. ಮೈಸೂರಿನ ಪಾರಂಪರಿಕ ಮಹತ್ವ ಸಾರಲು ಮೈಸೂರು ಅರಮನೆಯ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪಾಗಿ ಅರ್ಥೈಸುವ ಹುನ್ನಾರ ನಡೆದಿದೆ ಎಂದಿದ್ದಾರೆ.
10 ಲಕ್ಷ ವೆಚ್ಚದ ಬಸ್ ನಿಲ್ದಾಣ ಕಾಮಗಾರಿ ಇನ್ನೂ ಪ್ರಗತಿಯಲ್ಲಿದೆ. ಇದನ್ನು ಮಹದೇವ್ ಎಂಬ ಗುತ್ತಿಗೆದಾರನಿಗೆ ನೀಡಲಾಗಿದೆ. ಬಸ್ ನಿಲ್ದಾಣಗಳ ವಿನ್ಯಾಸಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ರಚಿಸಲಿ. ಸಮಿತಿ ವರದಿಯಲ್ಲಿ ತಪ್ಪಿದ್ದರೆ ಬದಲಾವಣೆ ಮಾಡಲು ನಮ್ಮ ಅಭ್ಯಂತರ ಇಲ್ಲ ಎಂದು ಶಾಸಕ ರಾಮದಾಸ್ ಪತ್ರದ ಮೂಲಕ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy