ಕೊರಟಗೆರೆ: ತಾಲ್ಲೂಕಿನ ಕಸಬಾ ವಿಎಸ್ ಎಸ್ ಎನ್ ನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಹಿಂದೆ ಅಧ್ಯಕ್ಷರಾಗಿದ್ದ ವಿನಯ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದರು. ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದೆ.
ತಾಲ್ಲೂಕಿನ ಕಸಬಾ ಹೋಬಳಿಯ ಗುಂಡಿನಪಾಳ್ಯ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಿ ಸಿ ರಮೇಶ್ ನಾಮಪತ್ರ ಸಲ್ಲಿಸಿದ್ದರು. ನಿಗದಿತ ಸಮಯದಲ್ಲಿ ಪ್ರತಿಸ್ಪರ್ಧಿಯಾಗಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ನೂತನ ಅಧ್ಯಕ್ಷರಾಗಿ ಜಿ.ಸಿ.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನಂತರ ಮಾತನಾಡಿದ ನೂತನ ಅಧ್ಯಕ್ಷರಾದ ಜಿ.ಸಿ.ರಮೇಶ್, ಸರ್ವ ಸದಸ್ಯರ ಒಗ್ಗಟ್ಟಿನಿಂದ ನಾನು ನೂತನವಾಗಿ ಕಸಬಾ ವಿಎಸ್ ಎಸ್ ಎನ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಮಾನ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ಆದೇಶಗಳಂತೆ ಮಾಜಿ ಸಹಕಾರ ಸಚಿವರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣರವರ ಮಾರ್ಗದರ್ಶನದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತೇನೆ ಎಂದರು.
ನಂತರ ಮಾತನಾಡಿದ ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷರಾದ ವಿನಯ್ ಕುಮಾರ್, ಆಡಳಿತ ಮಂಡಳಿಯ ಸರ್ವ ಸದಸ್ಯರ ಒಗ್ಗಟ್ಟಿನಿಂದ ಸರಳ ಸಜ್ಜನ ವ್ಯಕ್ತಿಯಾದ ಗುಂಡಿನಪಾಳ್ಯ ಗ್ರಾಮದ ಜಿ.ಸಿ.ರಮೇಶ್ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂಬರುವ ದಿನಗಳಲ್ಲಿ ರೈತರಿಗೆ ವಿನೂತನ ಮಾದರಿಯಲ್ಲಿ ಸಾಲ ಸೌಲಭ್ಯ ನೀಡುತ್ತೇವೆ ಉತ್ತಮ ಆಡಳಿತ ನಡೆಸುತ್ತೇವೆ ಎಂದರು.
ನಂತರ ಮಾತನಾಡಿದ ನಿರ್ದೇಶಕರಾದ ಕೆ.ವಿ.ಪುರುಷೋತ್ತಮ್, ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಅಧಿಕಾರ ವಿಕೇಂದ್ರೀಕರಣ ಆಗಬೇಕೆಂದು ಒಮ್ಮತದಿಂದ ತೀರ್ಮಾನಿಸಿ ಜಿ.ಸಿ.ರಮೇಶ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ. ಗೃಹ ಸಚಿವರ ಮತ್ತು ಮಾಜಿ ಸಹಕಾರ ಸಚಿವರ ಆದೇಶ ಮಾರ್ಗದರ್ಶನದಂತೆ ಒಳ್ಳೆಯ ಕೆಲಸ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಹೆಚ್.ಸಿ.ರಾಜಣ್ಣ, ಮಾಜಿ ಅಧ್ಯಕ್ಷರಾದ ವಿನಯ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣಮೂರ್ತಿ, ಉಪಾಧ್ಯಕ್ಷರು ಸುಂದರಮ್ಮ, ನಿರ್ದೇಶಕರಾದ ಸುರೇಶ್, ಪುರುಷೋತ್ತಮ್, ದಿವಾಕರ್, ಮಲ್ಲಣ್ಣ, ಪುಟ್ಟ ನರಸಪ್ಪ, ತಿಮ್ಮಪ್ಪ, ನೇತ್ರಾವತಿ, ಮೇಲ್ವಿಚಾರಕರಾದ ತಿಮ್ಮರಾಜು, ಕಾರ್ಯದರ್ಶಿ ಕೃಷ್ಣಮೂರ್ತಿ, ದಿನಕರ್, ಮಾರುತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮುಖಂಡರಾದ ಕಾಕಿ ಮಲ್ಲಯ್ಯ, ಶಿವರಾಮಯ್ಯ, ಭೀಮರಾಜ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಕಾಮರಾಜು,ಹಿರಿಯ ಮುಖಂಡರಾದ ಓಬಳರಾಜ್, ಮಹೇಶ್, ಸಿದ್ಧಲಿಂಗಯ್ಯ, ನಟರಾಜ್, ಶ್ರೀನಿವಾಸ್, ಶಿವಾನಂದ್, ಸೇರಿದಂತೆ ರೈತರು ಮತ್ತು ಸಾರ್ವಜನಿಕರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


