ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಎಸ್ ಎಸ್ ಎಫ್ ಜವಾನನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನಲಾಗಿದೆ. ಬುಧವಾರ ಮುಂಜಾನೆ 5:25 ಕ್ಕೆ ಈ ಘಟನೆ ನಡೆದಿದೆ. ಮೃತ ಸೈನಿಕನ ಹೆಸರು ಶತ್ರುಘ್ನ ವಿಶ್ವಕರ್ಮ ಎನ್ನಲಾಗಿದೆ .
ಅಯೋಧ್ಯೆ ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ನೋಡಿದ ಇತರ ಸೈನಿಕರು ಆಸ್ಪತ್ರೆಗೆ ಕರೆದುಕೊಂಡು ಹೋದರು . ಆದರೆ ಅಲ್ಲಿನ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎನ್ನಲಾಗಿದೆ.
ಘಟನ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ತಲುಪಿ ತನಿಖೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಪ್ರಕರಣವೆಂದು ಪರಿಗಣಿಸಲಾಗುತ್ತಿದೆ. ಈಗ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸಾವಿಗೆ ನಿಖರ ಕಾರಣ ಸ್ಪಷ್ಟವಾಗಲಿದೆ ಎನ್ನಲಾಗಿದೆ.
ದೇವಸ್ಥಾನದ ಭದ್ರತೆಗಾಗಿ ಯೋಗಿ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಎಸ್‌ಎಸ್‌ಎಫ್ ಪಡೆಯನ್ನು ರಚಿಸಿತ್ತು. ಘಟನೆಗೂ ಮುನ್ನ ಶತ್ರುಘ್ನ ಮೊಬೈಲ್ ನೋಡುತ್ತಿದ್ದ ಎಂದು ಮೃತ ಯೋಧನ ಸಹೋದ್ಯೋಗಿಗಳು ತಿಳಿಸಿದ್ದಾರೆ.ಅವರು ಕೆಲವು ದಿನಗಳಿಂದ ಯಾವುದೋ ಚಿಂತೆಯಲ್ಲಿದ್ದರು ಎಂಬುದಾಗಿ ತಿಳಿಸಿದ್ದಾರೆ, ಪೊಲೀಸರು ಅವರ ಮೊಬೈಲ್ ಅನ್ನು ಕೂಡ ವಿಚಾರಣೆಗೆ ಕಳುಹಿಸಿದ್ದಾರೆ. ಮೃತ ಯೋಧನ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA