ಜಾತಿ ಆದಾಯ ಪ್ರಮಾಣಪತ್ರ ಪಡೆಯಲು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದರೂ ಕಂದಾಯ ಇಲಾಖೆಯ ಅಧಿಕಾರಿಗಳು ತಿರಸ್ಕರಿಸುತ್ತಿದ್ದಾರೆ ಎಂದು ಗೂರ್ಖಾಸ್ ವೆಲ್‌ಫೇರ್ ಅಸೋಸಿಯೇಷನ್ ಆರೋಪಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಆರ್. ಜೋಗಮಲ್, ‘ರಾಜ್ಯದಲ್ಲಿ ಸುಮಾರು 30-40 ಸಾವಿರ ಜನಸಂಖ್ಯೆ ಹೊಂದಿರುವ ಗೂರ್ಖಾ ಸಮುದಾಯ ಪ್ರವರ್ಗ-1 ಪಟ್ಟಿಯಲ್ಲಿ ಇದೆ. ಅಧಿಕಾರಿಗಳು ಜಾತಿ ಪ್ರಮಾಣ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಆಗ್ರಹಿಸಿದರು. ‘ಈ ಸಮುದಾಯವು ಬಡತನ, ಅನಕ್ಷರತೆ ಜತೆಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದೆ. ಆದರೆ, ಇದುವರೆಗೂ ನಮಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಜಾತಿ ಮತ್ತು ಆದಾಯ ಪ್ರಮಾಣಪತ್ರ ನೀಡುತ್ತಿಲ್ಲ. ಚುನಾವಣಾ ಗುರುತಿನ ಚೀಟಿ, ಆಧಾರ್, ವಾಸಸ್ಥಳ ದೃಢೀಕರಣ ಸೇರಿ ಎಲ್ಲಾ ದಾಖಲೆಗಳನ್ನು ನೀಡಿದರೂ ಸಹ ನಮ್ಮ ಸಂವಿಧಾನಬದ್ಧ ಮನವಿಗಳನ್ನು ತಿರಸ್ಕರಿಸುತ್ತಿದ್ದಾರೆ’ ಎಂದು ದೂರಿದರು.
ಅಸೋಷಿಯೇಷನ್ ಕಾರ್ಯದರ್ಶಿ ಸೀತಾರಾಮ್, ಖಜಾಂಚಿ ಮಹದೇವ್ ಸಿಂಗ್, ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy