ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳ ಗುತ್ತಿಗೆಯ ಟೆಂಡರ್ ಪ್ರಕ್ರಿಯೆಯಲ್ಲಿ ಶೇ.40 ಲಂಚ ಪಡೆಯಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಮಾಡಿರುವ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.
ಸಮಸ್ತ ಲಿಂಗಾಯತ ಹೋರಾಟ ವೇದಿಕೆ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಿದ್ದು, 2013ರಿಂದ ಈವರೆಗೆ ನಡೆದಿರುವ ಎಲ್ಲ ಕಾಮಗಾರಿಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಬೇಕು ಎಂದು ವೇದಿಕೆಯ ಅಧ್ಯಕ್ಷ ಬಿ.ಎಂ.ಚಿಕ್ಕನಗೌಡರ ಒತ್ತಾಯಿಸಿದ್ದಾರೆ.
ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಗುರುತರವಾದ ಆರೋಪ ಕೇಳಿಬಂದಿದೆ. ಈ ವಿಚಾರದಲ್ಲಿ ಅತ್ಯಂತ ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಸಬೇಕು. ಲಂಚ ಪ್ರಮಾಣ ಹೆಚ್ಚುತ್ತಿರುವುದರಿಂದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಲು ಸಾಧ್ಯವಾಗುತ್ತಿಲ್ಲ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಹೇಳಿದ್ದಾರೆ. ಇದು ಅತ್ಯಂತ ಗಂಭೀರವಾದ ಸಮಸ್ಯೆ ಎಂದು ಅವರು ಹೇಳಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700