ತಿಪಟೂರು: ತಾಲೂಕಿನ ಜ್ಞಾನ ವಿಕಾಸ ವಿಭಾಗದ ವತಿಯಿಂದ ವಿಶೇಷ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮವನ್ನು ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕರಾದ ದಿನೇಶ್ ಪೂಜಾರಿ ಅವರು ದೇವಗೀತೆ ಹಾಗೂ ಧ್ವೇಯಗೀತೆ ಹಾಡಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಮಹಿಳೆಯರಲ್ಲಿ ಆತ್ಮವಿಶ್ವಾಸ ಮತ್ತು ಶಿಸ್ತು ಅತ್ಯಗತ್ಯ. ಸಂಘದ ಸದಸ್ಯರ ಆಸಕ್ತಿ ಹಾಗೂ ಶಿಸ್ತು ಶ್ಲಾಘನೀಯ,” ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಜ್ಞಾನ ವಿಕಾಸ ಕಾರ್ಯಕ್ರಮದ ವಿವಿಧ ವಿಷಯಗಳ ಬಗ್ಗೆ ಸುದೀರ್ಘ ಮಾಹಿತಿ ನೀಡಿದರು.
ಡಾ. ಯಮುನಾ ಅವರು ಕ್ಯಾನ್ಸರ್ ಖಾಯಿಲೆಯ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಆರಂಭಿಕ ಲಕ್ಷಣಗಳ ಕುರಿತು ಜಾಗೃತಿ ಮೂಡಿಸಿದರು.
ಡಾ. ಹರಿಪ್ರಿಯಾ ಅವರು ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆ ಕುರಿತು ಪ್ರಾತ್ಯಕ್ಷಿಕೆ ಹಾಗೂ ಸಂವಾದದ ಮೂಲಕ ಉಪಯುಕ್ತ ಮಾಹಿತಿ ನೀಡಿದರು.
ಕಾರ್ಯಕ್ರಮದ ಭಾಗವಾಗಿ ನೂತನವಾಗಿ ಪ್ರಾರಂಭಗೊಂಡ ಚಿಕ್ಕ ಹೊನ್ನವಳ್ಳಿ ಶಿವಾನಿ ಜ್ಞಾನ ವಿಕಾಸ ಕೇಂದ್ರ ಹಾಗೂ ಘಟಕಿನಕರೆ ಭೂಮಿ ಜ್ಞಾನ ವಿಕಾಸ ಕೇಂದ್ರಗಳಿಗೆ ಅಧಿಕೃತ ದಾಖಲಾತಿಗಳನ್ನು ಹಸ್ತಾಂತರಿಸಲಾಯಿತು.
ವಿಚಾರಗೋಷ್ಠಿಯ ಅಂಗವಾಗಿ ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ವಿವಿಧ ವಸ್ತುಗಳ ಪ್ರದರ್ಶನ ಮತ್ತು ಮಾರಾಟದ ಸ್ಟಾಲ್ಗಳನ್ನು ಅಳವಡಿಸಲಾಗಿತ್ತು.
ಈ ಸಮಾರಂಭದಲ್ಲಿ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ, ಯೋಜನಾಧಿಕಾರಿ ಉದಯ್ ಕೆ., ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಾವತಿ, ಮುಖ್ಯ ಅತಿಥಿ ಡಾ. ಶ್ರೀಧರ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪದ್ಮಾವತಿ ಎಂ.ಡಿ., ವಿವಿಧ ಸಂಪನ್ಮೂಲ ವ್ಯಕ್ತಿಗಳು, ತಾಲೂಕಿನ ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಯೋಜನೆಯ ಸಿಬ್ಬಂದಿ ಹಾಗೂ ಸೇವಾಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
