ಬೆಂಗಳೂರು: ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಧಾನಿ ಮೋದಿ ಹಾಗೂ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ಗೆ ಅವರಿಗೆ ದೇವೇಗೌಡ ಅವರು ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಕರ್ನಾಟಕದ ಗ್ರಾಮೀಣ ಭಾಗದ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರಕಾರ ಮಾರುಕಟ್ಟೆ ಮಧ್ಯೆಪ್ರವೇಶ ಮಾಡಿ, ನಫೆಡ್ ಮತ್ತು ಎನ್ಸಿಸಿಎಫ್ ಮೂಲಕ ತಕ್ಷಣ ಮಾವು ಖರೀದಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ವಿವಿಧ ಯೋಜನೆಗಳ ಮೂಲಕ ಸಾಕಷ್ಟು ಆರ್ಥಿಕ ಪ್ರಯೋಜನಗಳನ್ನು ಒದಗಿಸುವ ಮೂಲಕ ಮಾವು ಬೆಳೆಗಾರರಿಗೆ ನೆರವಾಗಬೇಕು. ಬೆಂಬಲ ಬೆಲೆಯಡಿ ಮಾವು ಖರೀದಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದೇ ವೇಳೆ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ತೋತಾಪುರಿ ಮಾವಿನ ಹಣ್ಣಿನ ನಿಷೇಧವನ್ನು ರದ್ದುಗೊಳಿಸುವಂತೆ ಆಂಧ್ರಪ್ರದೇಶ ಸರಕಾರಕ್ಕೂ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW