ಹೆಚ್.ಡಿ. ಕೋಟೆ: ತಾಲ್ಲೂಕಿನ ಚಿಕ್ಕಕೆರೆಯೂರು ಗ್ರಾಮದಿಂದ ಹೆಚ್.ಡಿ.ಕೋಟೆಗೆ ಮತ್ತು ಮೈಸೂರು ಕಡೆಗೆ ಹೋಗುವ ರಸ್ತೆಗಳು ತುಂಬಾ ಹದಗೆಟ್ಟಿದ್ದು, ಸಾರ್ವಜನಿಕರು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ .
ಮಲಾರ ಕಾಲೋನಿ ಗ್ರಾಮದಿಂದ ಹೆಚ್.ಡಿ.ಕೋಟೆಗೆ ಹೋಗುವ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಅದರೂ ರಸ್ತೆ ದುರಸ್ತಿ ಮಾಡಲು ಅಧಿಕಾರಿಗಳು ಮೀನಾಮಿಷ ಎಣಿಸುತ್ತಿದ್ದಾರೆ.
ರಸ್ತೆಯಲ್ಲಿ ಗುಂಡಿಗಳೋ ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಎನ್ನುವಂತಾಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ವಾಹನ ಚಲಾಯಿಸುವುದು ಎಂದರೆ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡೇ ವಾಹನ ಚಲಾಯಿಸಬೇಕು ಎಂದು ಹೇಳುತ್ತಾರೆ ಇಲ್ಲಿನ ಸಾರ್ವಜನಿಕರು.
ಈ ರಸ್ತೆಯಲ್ಲಿ ಪ್ರತಿ ನಿತ್ಯ ಸಂಚಾರಿಸುವ ನೂರಾರು ವಿದ್ಯಾರ್ಥಿಗಳು, ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಶಾಲಾ ಕಾಲೇಜುಗಳಿಗೆ ಹೋಗಿ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆಯಿಂದ ರೋಸಿ ಹೋಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ರಸ್ತೆ ಸರಿಪಡಿಸುವಂತೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ನಾಲ್ಕು ವರ್ಷದ ತನ್ನ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಜನರಿಗೆ ಕೊಡುಗೆಯಾಗಿ ನೀಡಿರುವುದು ಈ ಗುಂಡಿ ಬಿದ್ದ ರಸ್ತೆಗಳು ಮಾತ್ರ. ಕೇವಲ ಕ್ಷೇತ್ರದಲ್ಲಿ ಗುದ್ದಲಿ ಪೂಜೆಗಳನ್ನು ಮಾಡುತ್ತಿದ್ದು, ಕಾಮಗಾರಿಗಳು ಮಾತ್ರ ನೆನೆಗುದಿಗೆ ಬಿದ್ದಿರುವುದು ವಿಪರ್ಯಾಸವೇ ಸರಿ. ಇನ್ನಾದರೂ ಶಾಸಕರು ಎಚ್ಚೆತ್ತುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವರೇ ಕಾದು ನೋಡ ಬೇಕಿದೆ.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


