ನವದೆಹಲಿ: ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಹಾಗೂ H3N2 ಪ್ರಕರಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1000ಕ್ಕೂ ಅಧಿಕ ಪ್ರಕರಣಗಳು ದೇಶದಲ್ಲಿ ದಾಖಲಾಗಿದೆ.
ಇತ್ತ 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಲವು ರಾಜ್ಯಗಳು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪ್ರಧಾನಿ ನರೇಂದ್ರ ಮೋದಿ ಸಂಜೆ 4.30ಕ್ಕೆ ಮಹತ್ವದ ಸಭೆ ಕರೆದಿದ್ದಾರೆ.
ಸದ್ಯ ಭಾರತದಲ್ಲಿರುವ ಪ್ರಕರಣಗಳು ಹರಡುತ್ತಿರುವ ವೇಗ, ಪರಿಸ್ಥಿತಿ ಎದುರಿಸಲು ಕೈಗೊಂಡಿರುವ ಮುನ್ನಚ್ಚರಿಕೆ ಕ್ರಮಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಇಷ್ಟೇ ಅಲ್ಲ ಪ್ರಧಾನಿ ಮೋದಿ ಕೆಲ ಸೂಚನೆ ನೀಡುವ ಸಾಧ್ಯತೆ ಇದೆ.ಅಧಿಕಾರಿಗಳಿಂದ ಭಾರತದಲ್ಲಿನ ಕೋವಿಡ್ ಹಾಗೂ H3N2 ಪ್ರಕರಣಗಳ ಸಂಖ್ಯೆ ಮಾಹಿತಿ ಪಡೆಯಲಿರುವ ಮೋದಿ, ಆಯಾ ರಾಜ್ಯದಲ್ಲಿನ ಪರಿಸ್ಥಿತಿ ಅವಲೋಕಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


