ರಾಜ್ಯದಲ್ಲಿ ಎಚ್3ಎನ್2 ವೈರಸ್ ಸೋಂಕು ಪತ್ತೆಯಾಗಿದ್ದು 26 ಜನರಿಗೆ ಸೋಂಕು ತಗುಲಿದೆ ಇದಕ್ಕೆ ಯಾವುದೇ ಭಯ ಪಡುವ ಅಗತ್ಯವಿಲ್ಲ ಆದರೆ ಮುನ್ನೆಚ್ಚರಿಕೆ ಅಗತ್ಯ. ಈ ಕುರಿತು ಶೀಘ್ರದಲ್ಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಹೇಳಿದ್ದಾರೆ.
ಹಿರಿಯ ಅಧಿಕಾರಿಗಳು ಹಾಗೂ ತಜ್ಞರು ಒಳಗೊಂಡಿರುವ ತಾಂತ್ರಿಕ ಸಲಹಾ ಸಮಿತಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು,ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬಂದಿಗಳಿಗೆ ತಕ್ಷಣದಿಂದಲೇ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗುವುದು ಎಂದಿದ್ದಾರೆ.
H3N2 ವೈರಸ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಜನಸಂದಣಿಯಿಂದ ದೂರವಿರಬೇಕು. ವೈದ್ಯರ ಸಲಹೆಯಿಲ್ಲದೆ ಔಷಧ ಸೇವಿಸುವುದು, ಅನಗತ್ಯವಾಗಿ ಆಂಟಿಬಯೋಟಿಕ್ ಸೇವನೆ ಮಾಡುವುದು ಸರಿಯಲ್ಲ ಔಷಧದ ಕೊರತೆ ಇಲ್ಲ, ಅಗತ್ಯ ಔಷಧಗಳನ್ನು ದಾಸ್ತಾನು ಮಾಡಲಾಗಿದೆ ಸೋಂಕು 2-5 ದಿನಗಳಲ್ಲಿ ಮಾಯವಾಗುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


