ತುಮಕೂರು: ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಹಜ್ ಯಾತ್ರಿಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ನಂತರ ಅದನ್ನು ಕ್ಯಾನ್ಸಲ್ ಮಾಡಲಾಗಿದೆ ಎಂದು ಹಜ್ ಖಾತೆ ಸಚಿವ ರಹೀಮ್ ಖಾನ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಯಾತ್ರಿಕರಿಗೆ ಮಾಹಿತಿ ನೀಡುವ ಕೆಲಸಕ್ಕೆ ಮಾತ್ರ ರಾಜ್ಯ ಸರ್ಕಾರದಿಂದ ಅವರಿಗೆ ಸಹಾಯ ಸಿಗಲಿದೆ. ದೇಶದಿಂದ ಲಕ್ಷಾಂತರ ಜನ ಏಕಕಾಲದಲ್ಲಿ ಬರೋದರಿಂದ ಸ್ವಲ್ಪ ಸಮಸ್ಯೆಯಾಗಿದೆ. ಹಜ್ ಯಾತ್ರಿಗಳ ಬಗ್ಗೆ ಕೇಂದ್ರ ಸರ್ಕಾರವೇ ಅವರ ಯೋಗ ಕ್ಷೇಮ ನೋಡಿಕೊಳ್ಳಲಿದೆ. ಮುಂದಿನ ದಿನಗಳಲ್ಲಿ ಹಜ್ ಯಾತ್ರಿಗಳಿಗೆ ರಾಜ್ಯ ಸರ್ಕಾರದಿಂದ ಸಬ್ಸಡಿ ಯೋಜನೆ ಇಲ್ಲ ಎಂದು ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————