ನವದೆಹಲಿ: ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯ ಮಟ್ಟ ಏರಿಕೆ ಹಿನ್ನೆಲೆ ಸರ್ಕಾರಿ ಕಚೇರಿಗಳ ಅರ್ಧದಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಬುಧವಾರ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್/ಟ್ವಿಟರ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಚಿವ, ಮಾಲಿನ್ಯ ನಿಯಂತ್ರಿಸುವ ಸಲುವಾಗಿ, ಸರ್ಕಾರಿ ನೌಕರರಿಂದ ಮನೆಯಿಂದಲೇ ಕೆಲಸ ಮಾಡಿಸಲು ನಿರ್ಧರಿಸಲಾಗಿದೆ.
ಶೇ 50ರಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ. ನಿಯಮ ಜಾರಿಗೆ ಸಂಬಂಧಿಸಿಂತೆ ಮಧ್ಯಾಹ್ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದಿದ್ದಾರೆ.
ದೆಹಲಿಯಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದ್ದರೂ ಕಠಿಣ ಕ್ರಮಗಳನ್ನು ಜಾರಿಗೊಳಿಸುವಲ್ಲಿ ವಿಳಂಬ ಏಕಾಯಿತು ಎಂದು ಸುಪ್ರೀಂ ಕೋರ್ಟ್ ಸೋಮವಾರ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296