ಹಾಲಿನ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಲ್ಲ. ಆದರೆ ಹಾಲಿನ ಉತ್ಪನ್ನಗಳು ದರ ಏರಿಕೆಯಾಗಲಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳ ಕೆಎಂಎಫ್ ತಿಳಿಸಿದೆ.
ಕೇಂದ್ರ ಸರ್ಕಾರ ಶೇ.5ರ ಸರಕು ಸೇವಾ ಸುಂಕ (ಹಾಲಿನ ಪ್ಯಾಕೇಟ್ ಉತ್ಪನ್ನ) ವಿಧಿಸಿರುವ ಹಿನ್ನೆಲೆಯಲ್ಲಿ (ಲೇಬಲ್ಡ್ ಅಕ್ಕಿ ಇತರೆ) ನಾಳೆಯಿಂದ ಬೆಲೆ ಹೆಚ್ಚಳವಾಗಲಿದೆ.
ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ 1ರಂದ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್ ಮೊಸರಿಗೆ 43 ಇತ್ತು. ಜುಲೈ 18ರಿಂದ ಅದು 46 ಆಗಲಿದೆ. ಅರ್ಧ ಲೀಟರ್ ಮೊಸರಿನ ಬೆಲೆ 22 ಇತ್ತು. ನಾಳೆಯಿಂದ 24 ಆಗಲಿದೆ. ಮಜ್ಜಿಗೆ 200 ಎಂಎಲ್ ಮಜ್ಜಿಗೆ ಹಾಗೂ ಲಸ್ಸಿ ಮೇಲೆ 1ರೂ. ಹೆಚ್ಚಿಸಲಾಗಿದೆ.
ಪಾಕೆಟ್ ನಲ್ಲಿ ಸದ್ಯ ಹಳೆಯ ದರಗಳೇ ನಮೂದಾಗಿರುತ್ತವೆ. ಆದರೆ, ಗ್ರಾಹಕರು ಹೊಸದಾಗಿ ನಿಗದಿಪಡಿಸಿರುವಷ್ಟು ದರ ನೀಡಿ ಖರೀದಿಸಬೇಕು ಎಂದು ಕೆಎಂಎಫ್ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz