ಪಾವಗಡ: ಟೈಯರ್ ಪಂಕ್ಚರ್ ಆದ ಪರಿಣಾಮ ಬಸ್ಸೊಂದು ಅಪಘಾತಕ್ಕೀಡಾದ ಘಟನೆ ಪಾವಗಡ ತಾಲೂಕಿನ ಬಳ್ಳಿ ಬಟ್ಟಲು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ್ದು, ತುಮಕೂರು ಮತ್ತು ಚಿತ್ರದುರ್ಗ ಮಾರ್ಗವಾಗಿ ಸಂಚರಿಸುವ ಬಸ್ ಅಪಘಾತಕ್ಕೀಡಾಗಿರುವ ಬಸ್ ಆಗಿದೆ.
ಮಂಗಳವಾರ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ, ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳು ಹೊರತುಪಡಿಸಿ ಯಾವುದೇ ರೀತಿಯ ಗಂಭೀರ ಗಾಯಗಳಾಗಿಲ್ಲ.
ಬಸ್ ನ ಮುಂಭಾಗದ ಟೈರ್ ಪಂಚರ್ ಆದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಹಳ್ಳಕ್ಕೆ ಇಳಿದಿದ್ದು, ಬಸ್ ನ ಮುಂಭಾಗ ಪುಡಿಪುಡಿಯಾಗಿದೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy