ಧಾರವಾಡ: ಹೆಂಡತಿ ಕೊಲೆ ಮಾಡಿದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.
ಶ್ರೀದೇವಿ ರಾಮಾಪುರ ಕೊಲೆಯಾದ ದುರ್ದೈವಿ. ರಾಜು ರಾಮಾಪುರ ಎಂಬಾತನೇ ಪತ್ನಿ ಕೊಂದು ಸಾವಿಗೆ ಶರಣಾದ ಪತಿ. ಪತ್ನಿ ಶ್ರೀದೇವಿಯನ್ನು ಹೊಲದಲ್ಲೇ ಕೊಡಲಿಯಿಂದ ಕೊಚ್ಚಿ ರಾಜು ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ಬಳಿಕ ಹೊಲದಲ್ಲೇ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


