ಬೀದರ್: ಯುವತಿ ಭಾಗ್ಯಶ್ರೀ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಶಾಸಕ ಶರಣು ಸಲಗಾರ ಆಗ್ರಹಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಯುವತಿಯ ಹತ್ಯೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೀದರ್ ಹಾಗೂ ಬಿಜೆಪಿಯ ಯುವ ಮೋರ್ಚಾ ಮತ್ತು ಎಸ್ ಟಿ ಮೋರ್ಚಾ ಜಂಟಿಯಾಗಿ ಬೀದರ್ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ಅಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ರ‍್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಬಸವಕಲ್ಯಾಣ ತಾಲೂಕಿನ ಶಾಸಕ ಶರಣು ಸಲಗಾರ ಪ್ರತಿಭಟನೆ ರ‍್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿ, ಗುಣತೀರ್ಥವಾಡಿ ಭಾಗ್ಯಶ್ರೀ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಈ ಘಟನೆ ಇಡೀ ಮಾನವ ಕುಲವೆ ಬೆಚ್ಚಿ ಬೀಳಿಸುವ ಕೃತ್ಯವಾಗಿದೆ. ಇಂತಹ ಘಟನೆ ನನ್ನ ಮತ ಕ್ಷೇತ್ರದಲ್ಲಿ ನಡೆದಿರುವುದು ನೋವಿನ ಸಂಗತಿಯಾಗಿದೆ ಎಂದರು.
ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


