nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಣ್ಣನ್ನು ಮುಂದಿಟ್ಟುಕೊಂಡು ಹರ್ಷನನ್ನು ಹತ್ಯೆ ಮಾಡಿದರೇ ಕಟುಕರು..?
    ರಾಜ್ಯ ಸುದ್ದಿ February 24, 2022

    ಹೆಣ್ಣನ್ನು ಮುಂದಿಟ್ಟುಕೊಂಡು ಹರ್ಷನನ್ನು ಹತ್ಯೆ ಮಾಡಿದರೇ ಕಟುಕರು..?

    By adminFebruary 24, 2022No Comments2 Mins Read
    harsha

    ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷನ ಕೊಲೆ ಮಾಡಲು ಹಲವು ರೀತಿಯ ತಯಾರಿಗಳನ್ನು ಮಾಡಿಕೊಂಡಿದ್ದ ದುಷ್ಕರ್ಮಿಗಳು, ಸಹಾಯ ಕೇಳುವ ನೆಪದಲ್ಲಿ ಹೆಣ್ಣುಮಕ್ಕಳಿಂದ ಕರೆ ಮಾಡಿಸಿದ್ದರೆ ಎಂಬ ಅನುಮಾನಗಳು ಚರ್ಚೆಗೆ ಗ್ರಾಸವಾಗುತ್ತಿವೆ.

    ತನಿಖೆ ಆರಂಭಿಸಿರುವ ಪೊಲೀಸರು ಎಲ್ಲಾ ರೀತಿಯಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆಯಾದ ದಿನ ಹರ್ಷ ಬೈಕ್‍ನಲ್ಲಿ ಹೋಗದೆ, ಮೂವರು ಸ್ನೇಹಿತರ ಜತೆ ನಡೆದುಕೊಂಡು ಹೋಗುತ್ತಿದ್ದ. ಅಮ್ಮಾ ಕಾಂಟೀನ್‍ ವರೆಗೂ ಸ್ನೇಹಿತರು ಜತೆಯಲ್ಲೇ ಇದ್ದರು, ಅಲ್ಲಿ ಸ್ನೇಹಿತರಿಗೆ ಬೈಕ್ ಕೀ ಕೊಟ್ಟ ಹರ್ಷ ಯಾಕೋ ಪರಿಸ್ಥಿತಿ ಸರಿ ಹೋಗುತ್ತಿಲ್ಲ ಬೈಕ್ ತನ್ನಿ ಎಂದು ಹೇಳಿದ್ದಾನೆ. ಇದಕ್ಕೂ ಮೊದಲು ಹರ್ಷನ ಮೊಬೈಲ್‍ ಗೆ ಇಬ್ಬರು ಯುವತಿಯರು ಪದೇ ಪದೇ ವಿಡಿಯೋ ಕಾಲ್ ಮಾಡುತ್ತಿದ್ದರು. ಅದನ್ನು ರಿಸೀವ್ ಮಾಡಿದ್ದ ಆತ ಯಾರು ಎಂದು ಕೇಳಿದ. ಆಗ ಅವರು, ನಿಮ್ಮ ಸ್ನೇಹಿತೆಯರು ಎಂದು ಹೇಳಿದ್ದಾರೆ. ನನಗೆ ನಿಮ್ಮ ಪರಿಚಯ ಇಲ್ಲ ಎಂದು ಕಾಲ್ ಕಟ್ ಮಾಡಿದ್ದರೂ ಕೂಡ ಪದೇ ಪದೇ ಕರೆ ಮಾಡುತ್ತಲೇ ಇದ್ದರು ಎಂದು ಹರ್ಷ ಅವರ ಸ್ನೇಹಿತ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.


    Provided by
    Provided by

    ಕರೆ ಮಾಡಿದವರು ಯಾರು? ಏನು ಕಷ್ಟವಾಗಿದೆ ಎಂಬುದು ಅರ್ಥವಾಗದೆ ಗೊಂದಲದಲ್ಲಿದ್ದ ಹರ್ಷ ಯಾಕೊ ಪರಿಸ್ಥಿತಿ ಸರಿಯಿಲ್ಲ ಎಂದು ಅಪಾಯವನ್ನು ಶಂಕಿಸಿದ್ದ ಎನ್ನಲಾಗಿದೆ. ಸ್ನೇಹಿತರು ದೂರ ಇರುವುದನ್ನು ಗಮನಿಸಿ ದುಷ್ಕರ್ಮಿಗಳು ಕಾರಿನಲ್ಲಿ ಬಂದು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಸ್ನೇಹಿತರ ಮೊಬೈಲ್‍ ಗೆ ಕರೆ ಬಂದಿದೆ. ಅವರು ಸ್ಥಳಕ್ಕೆ ಧಾವಿಸುವ ವೇಳೆಗೆ ದುರ್ಘಟನೆ ನಡೆದು ಹೋಗಿತ್ತು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯ ಪೈಕಿ ಒಬ್ಬ ಹಲವು ದಿನಗಳಿಂದ ಹರ್ಷನ ಚಲನ ವಲನಗಳನ್ನು ಗಮನಿಸುತ್ತಿದ್ದ ಎಂದು ಸ್ನೇಹಿತರು ಹೇಳಿದ್ದಾರೆ.

    ತನಿಖೆ ಆರಂಭಿಸಿರುವ ಪೊಲೀಸರು ಎಲ್ಲಾ ರೀತಿಯ ಮಾಹಿತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಯಾದ ವೇಳೆ ಕರೆ ಮಾಡಿದ್ದು, ಯಾರು ನಿಜವಾಗಿಯೂ ಅವರಿಗೆ ಕಷ್ಟ ವಿತ್ತೆ ಅಥವಾ ಹರ್ಷನ ಗಮನವನ್ನು ಬೇರೆ ಕಡೆ ಸೆಳೆಯಲು ವ್ಯೂಹ ರಚಿಸಲಾಗಿತ್ತೆ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ.ಈ ನಡುವೆ ಆರೋಪಿಗಳು ಕೊಲೆಗೆ 20 ದಿನಗಳ ಹಿಂದೆಯೇ ಸ್ಕೆಚ್ ಹಾಕಿದ್ದರೆಂಬ ಮಾಹಿತಿ ಬಹಿರಂಗಗೊಂಡಿದೆ. ಹರ್ಷ ಓಡಾಡುವ, ನಿಂತು ಕೊಳ್ಳುತ್ತಿದ್ದ ಸ್ಥಳಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಎಲ್ಲೆಲ್ಲಿ ಸಿಸಿಟಿವಿಗಳಿವೆ ಎಂಬುದನ್ನು ಗಮನಿಸಿದ್ದಾರೆ. ಸಾಕ್ಷ್ಯ ಸಿಗದಂತಾಗಲು ಸಿಸಿಟಿವಿ ಇಲ್ಲದ ಕಡೆಯೇ ಕೊಲೆ ಮಾಡುವ ಉದ್ದೇಶ ಹೊಂದಿದ್ದರು ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

    ಫೆ.20ರಂದು ಕೊಲೆಯಾಗಿದ್ದು, ಅದಕ್ಕಿಂತ ಮೂರು ದಿನಗಳ ಹಿಂದೆಯೂ ಪ್ರಯತ್ನ ನಡೆದಿತ್ತು. ಆದರೆ ಅಂದು ಹರ್ಷನೊಂದಿಗೆ ಹಲವು ಜನ ಇದ್ದಿದ್ದರಿಂದ ದುಷ್ಕರ್ಮಿಗಳ ಸಂಚು ಯಶಸ್ವಿಯಾಗಿರಲಿಲ್ಲ. ಕೊನೆಗೆ ಕಾದಿದ್ದು ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.