ಸರಗೂರು: ಹಿಂದೂ ಸಂಘಟನೆಗಳ ಜಾಗೃತಿಗಾಗಿ ಪಟ್ಟಣದ ಶ್ರೀ ಹನುಮಜಯಂತಿ ಅಚರಣಾ ಸಮಿತಿ ಶನಿವಾರ ಆಯೋಜಿಸಿದ್ದ ಹನುಮ ಜಯಂತಿ ಉತ್ಸವದ ಶೋಭಯಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು. ದಾರಿಯುದ್ದಕ್ಕೂ ಭಗವಾನ್ ಹನುಮನ ಘೋಷಣೆ ಮೊಳಗಿದವು.
ಶೋಭಾಯಾತ್ರೆ ಅಂಗವಾಗಿ ಪಲ್ಲಕ್ಕಿಯಲ್ಲಿ ಕೂರಿಸಿದ್ದ ಹನುಮಂತನ ಭಾವಚಿತ್ರಕ್ಕೆ ತಾಲೂಕಿನ ಹಂಚೀಪುರ ಮಠದ ಚನ್ನಬಸವ ಸ್ವಾಮೀಜಿ, ದಡದಹಳ್ಳಿ ಮಠದ ಷಡಕ್ಷರಿಸ್ವಾಮೀಜಿ, ಶಾಸಕ ಅನಿಲ್ ಚಿಕ್ಕಮಾದು, ಜೆಡಿಎಸ್ ಮುಖಂಡ ಜಯಪ್ರಕಾಶ್, ಬಿಜೆಪಿ ಮುಖಂಡರಾದ ಡಾ.ಎಚ್.ವಿ.ಕೃಷ್ಣಸ್ವಾಮಿ, ಎಂ.ಅಪ್ಪಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಹಂಚೀಪುರ ಗುರುಸ್ವಾಮಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಆಚರಣಾ ಸಮಿತಿ ಅಧ್ಯಕ್ಷ ಚನ್ನಪ್ಪ ಸೇರಿದಂತೆ ಮುಖಂಡರು ಹನುಮನ ಭಾವಚಿತ್ರವುಳ್ಳ ಶೋಭಯಾತ್ರೆಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಪಟ್ಟಣದ ಕೆಇಬಿ ಕಚೇರಿಯಿಂದ ಹೊರಟ ಶೋಭಾಯಾತ್ರೆ ಮೆರವಣಿಗೆಯು ಹುಣಸೂರು-ಎನ್.ಬೇಗೂರು ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣ, ಮಹಾವೀರ ವೃತ್ತ, ಚಿಕ್ಕದೇವಮ್ಮನ ವೃತ್ತ, ಮೂಲಕ 2ನೇ ಮುಖ್ಯ ರಸ್ತೆಯಲ್ಲಿ ಸಾಗಿ ಸಂತೆಮಾಳದ ಮಾಸ್ತಮ್ಮನ ದೇವಸ್ಥಾನದಲ್ಲಿ ಸಮಾವೇಶಗೊಂಡಿತು.
ಪಟ್ಟಣದ ಪ್ರಮುಖ ಬೀದಿಗಳು ಕೆಸರಿಮಯವಾಗಿದ್ದು, ಹನುಮನ ಭಕ್ತರ ಕೈಯಲ್ಲಿ ಕೇಸರಿ ಬಾವುಟಗಳು ರಾರಾಜಿಸಿದವು. ಇದಲ್ಲದೆ ಭಕ್ತರು ಹನುಮನ ಧ್ಯಾನ, ಶ್ಲೋಕಗಳನ್ನು ಪಠಣ ಮಾಡಿ, ವಿವಿಧ ಘೋಷಣೆ ಕೂಗುತ್ತಾ ದಾರಿಯುದ್ದಕ್ಕೂ ಜೈಕಾರ ಹಾಕಿದರು. ವಾದ್ಯಗೋಷ್ಠಿಗಳು ಮೊಳಗಿದವು. ನೆಮ್ಮನಹಳ್ಳಿ ಮಹದೇವು ಮತ್ತು ತಂಡದಿಂದ ಆದಿವಾಸಿ ಜನಾಂಗದ ಕುಣಿತ ಮೆರವಣಿಗೆಗೆ ಮೆರಗು ತಂದಿತು. ನೀಲಕಂಠ ತಂಡದಿಂದ ವೀರಗಾಸೆ ನೃತ್ಯ ಪ್ರದರ್ಶನವಾಯಿತು. ಅಲ್ಲಲ್ಲಿ ಮಜ್ಜಿಗೆ, ಪಾನಕ ವಿತರಿಸಲಾಯಿತು. ಗಡಿಗೊಂಬೆ ಪ್ರದರ್ಶಿಸಲಾಯಿತು. ಇದರೊಂದಿಗೆ ಮುಸ್ಲಿಂ ಬಾಂಧವರೂ ಮಜ್ಜಿಗೆ ವಿತರಣೆ ಮಾಡಿದ್ದು, ವಿಶೇಷವಾಗಿತ್ತು.
ಹಂಚೀಪುರ ಮಠದ ಚನ್ನಬಸವಸ್ವಾಮೀಜಿ ಮಾತನಾಡಿ, ಎಲ್ಲರೂ ಒಗ್ಗೂಡಿ ಹನುಮನ ಜಯಂತಿ ಆಚರಣೆ ಮಾಡುತ್ತಿರುವುದು ಸಂತಸ ತಂದಿದೆ. ಸದೃಢ, ಸಮಾನತೆ ಭಾರತವನ್ನು ನಿರ್ಮಾಣ ಮಾಡುವ ಜವಾಬ್ದಾರಿ ಯುವಕರ ಮೇಲಿದೆ. ಹೀಗಾಗಿ ಎಲ್ಲರೂ ಶ್ರಮಿಸಬೇಕು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಎಚ್ಚರವಹಿಸಿದರೆ ಒಳಿತು ಎಂದು ತಿಳಿಸಿದರು.
ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿದರು. ತಾಲೂಕು ಬಿಜೆಪಿ ಅಧ್ಯಕ್ಷ ಹಂಚೀಪುರ ಗುರುಸ್ವಾಮಿ, ವೀರಶೈವ ಲಿಂಗಾಯತ ಮಹಾಸಭಾದ ಸರಗೂರು ತಾಲೂಕು ಅಧ್ಯಕ್ಷ ಡಿ.ಜಿ.ಶಿವರಾಜು, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಬಿಜೆಪಿ ಮುಖಂಡ ಡಾ.ಎಚ್.ವಿ.ಕೃಷ್ಣಸ್ವಾಮಿ, ಎಂ.ಅಪ್ಪಣ್ಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಚಿಕ್ಕವೀರನಾಯಕ,ಪಿ ರವಿ, ಭಾಗ್ಯಲಕ್ಷ್ಮಿ , ಶಂಕರೇಗೌಡ, ಜೆಡಿಎಸ್ ಮುಖಂಡ ಜಯಪ್ರಕಾಶ್, ಆಚರಣ ಸಮಿತಿ ಅಧ್ಯಕ್ಷ ಚೆನ್ನಪ್ಪ, ಮುಖಂಡರಾದ ಹಂಚೀಪುರ ಗಣಪತಿ, ಜೆಡಿಎಸ್ ಮುಖಂಡ ಪ್ರಕಾಶ್, ವಿನಯ್, ಭಜರಂಗಿ ರಾಮು, ಮಂಡ್ಯ ಮಂಜು, ಜಗದೀಶ್ ಮಾಗುಡಿಲು, ನಂಜಪ್ಪ ಹಂಚೀಪುರ, ವೇಣುಗೋಪಾಲ್, ಆನಂದ ಮೈಲಾರಿ, ಪೈಂಟ್ ನಾಗರಾಜು,ಮಂಜು, ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಸಮಿತಿ ಸದಸ್ಯರು, ಮುಖಂಡರು ಹಾಜರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


