ತುಮಕೂರು: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ದೇಗುಲದ ಎದುರು ಬೃಹತ್ ರಥೋತ್ಸವ ಜರುಗಿತು. ರಥೋತ್ಸವದಲ್ಲಿ ಸಾವಿರಾರು ಮಂದಿ ಹನುಮನ ಭಕ್ತರು ಭಾಗವಹಿಸಿದ್ದರು.
ರಥದಲ್ಲಿ ಆಂಜನೇಯ ಸ್ವಾಮಿಯ ವಿಗ್ರಹವನ್ನು ಇರಿಸುತ್ತಿದ್ದಂತೆ ಬಾನಂಗಳದಲ್ಲಿ ಗರುಡ ಮೂರು ಸುತ್ತು ಪ್ರದಕ್ಷಣೆ ಹಾಕಿದ ನಂತರ ನೂರಾರು ಭಕ್ತರು ರಥವನ್ನು ಎಳೆದು ಪುನೀತರಾದರು. ಬಿರುಬಿಸಿಲಿನಲ್ಲಿಯೂ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW