ಹನೂರು ವಿಧಾನಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದ ಮತಗಟ್ಟೆ ಸಂಖ್ಯೆ 146ರಲ್ಲಿ ಇಂದು ಲೋಕಸಭಾ ಚುನಾವಣೆಗೆ ಮರುಮತದಾನ ಆರಂಭವಾಗಿದೆ.
ಏ.26ರಂದು ನಡೆದ ಚುನಾವಣೆ ವೇಳೆ ಮತಗಟ್ಟೆ ಕೇಂದ್ರದ ಬಳಿ ಉಂಟಾದ ಗಲಭೆಯಲ್ಲಿ ಇಲೆಕ್ಟ್ರಾನಿಕ್ ಮತಯಂತ್ರವನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನಲೆ ಕೇಂದ್ರ ಚುನಾವಣಾ ಆಯೋಗ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ಮಾಡಲು ಅವಕಾಶ ಕಲ್ಪಿಸಿದೆ.
ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದರು. ಆದರೆ, ಶೂನ್ಯ ಮತದಾನವಾಗುವ ಭೀತಿಯಿಂದಾಗಿ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿ ಮತದಾನಕ್ಕೆ ಕರೆತಂದಿದ್ದರು.
ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಕೇಂದ್ರದ ಮೇಲೆ ದಾಳಿ ಮಾಡಿದ್ದರು. ಮತಗಟ್ಟೆಗೆ ನುಗ್ಗಿದ ಕೆಲ ಮಂದಿ ಮತ ಯಂತ್ರ ಧ್ವಂಸ ಮಾಡಿದ್ದಲ್ಲದೆ, ಕಲ್ಲುತೂರಾಟ ನಡೆಸಿದ್ದರು. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಮಹಿಳೆಯರು, 13 ಪುರುಷರು ಸೇರಿ ಒಟ್ಟು 36 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296