ಬೆಂಗಳೂರು: ಪತ್ನಿ ಹಾಗೂ ಮಾವನ ಕಿರುಕುಳದಿಂದ ಮನನೊಂದು ಹೆಡ್ ಕಾನ್ ಸ್ಟೇಬಲ್ ವೊಬ್ಬರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿರುವ ಘಟನೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ತಿಪ್ಪಣ್ಣ (33 ) ಸಾವಿಗೆ ಶರಣಾದವರಾಗಿದ್ದಾರೆ. ಸಾವಿಗೂ ಮುನ್ನ ತನ್ನ ಪತ್ನಿ ಹಾಗೂ ಮಾವನ ವಿರುದ್ಧ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬಿಜಾಪುರ ಮೂಲದ ತಿಪ್ಪಣ್ಣ ಮೂರು ವರ್ಷದ ಹಿಂದೆ ಮದುವೆಯಾಗಿದ್ದರು, ಇತ್ತೀಚಿನ ದಿನಗಳಲ್ಲಿ ಪತ್ನಿ ಹಾಗೂ ಆಕೆಯ ತಂದೆಯ ಕಿರುಕುಳದಿಂದ ಮನನೊಂದಿದ್ದರು. ಇವರಿಬ್ಬರ ವರ್ತನೆಯಿಂದ ಮಾನಸಿಕವಾಗಿ ತಿಪ್ಪಣ್ಣ ಅವರು ಬೇಸತ್ತಿದ್ದರು.
ಪತ್ನಿಯ ತಂದೆ ಯಮುನಪ್ಪ ಅವರು ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ನೀನು ಸತ್ತು ಹೋಗು ಆಗ ನನ್ನ ಮಗಳು ಚೆನ್ನಾಗಿ ಇರುತ್ತಾಳೆ ಎಂದು ಬೈದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx