ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಅರಳಗುಪ್ಪೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಮಹಿಳೆಯೊಬ್ಬರು ನೇಣು ಬಿಗಿದು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.
ಭಾಗ್ಯಮ್ಮ(50) ಸಾವಿಗೆ ಶರಣಾದ ಮಹಿಳೆಯಾಗಿದ್ದಾರೆ. ಮೃತ ಮಹಿಳೆ ತಿಪಟೂರಿನ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸುಮಾರು 5 ಲಕ್ಷ ಸಾಲ ಪಡೆದು ಸಾಲ ಪಡೆದುಕೊಂಡಿದ್ದು, ಸಾಲ ಹಿಂದಿರುಗಿಸಲಾಗದೆ, ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮೃತ ಮಹಿಳೆಗೆ ಇಬ್ಬರು ಗಂಡು ಮಕ್ಕಳಿದ್ದು, ಗಂಡ ನಿಧನರಾಗಿದ್ದು, ಒಬ್ಬರೇ ಜೀವನ ಸಾಗಿಸುತ್ತಿದ್ದರು.
ಗ್ರಾಮದಲ್ಲಿ ಇದು ಮೂರನೇ ಘಟನೆ:
ಈ ಗ್ರಾಮದಲ್ಲಿ ಈವರೆಗೆ ನಡೆದ ಘಟನೆಗಳಲ್ಲಿ ಇದು ಮೂರನೇ ಘಟನೆಯಾಗಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಯವರು ಕಮಿಷನ್ ಆಸೆಗೋಸ್ಕರ ಸುಮಾರು ಎಂಟರಿಂದ ಹತ್ತು ಜನ ಮಹಿಳೆಯರ ಗುಂಪು ಮಾಡಿ ಸಾಲ ವಿತರಿಸುತ್ತಿದ್ದು, ಬರಗಾಲದಲ್ಲಿ ಸಾಲ ಪಡೆದು ಪಾವತಿಸಲಾಗದೇ ಮಹಿಳೆಯರು ಜೀವ ಕಳೆದುಕೊಳ್ಳುವಂತಾಗಿದೆ. ಈಕೆಯ ಸಾವಿಗೆ ಕಾರಣರಾದ ಮೈಕ್ರೋ ಫೈನಾನ್ಸ್ ಕಂಪನಿಗಳ ಮತ್ತು ಸಿಬ್ಬಂದಿಗಳ ಮೇಲೆ ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನ ತಾಲೂಕು ಆಡಳಿತ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಗ್ರಾಮದ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಈ ಪ್ರಕರಣ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA