ಬೆಂಗಳೂರು: ಶಾಲಾ ಸಹಪಾಠಿಗಳ ಲೈಂಗಿಕ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ.
ಸಿಡೇದಹಳ್ಳಿ ನಿವಾಸಿ ಮಮತಾ (31) ಸಾವಿಗೆ ಶರಣಾದ ಮಹಿಳೆಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜೆ.ಪಿ.ನಗರ ನಿವಾಸಿ, ಆರೋಪಿ ಗಣೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಅಶೋಕ್ ಎಂಬಾತನ ಬಂಧನಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.
ಆರೋಪಿಗಳು ಮಮತಾಳ ಹೈಸ್ಕೂಲ್ ಸಹಪಾಠಿಗಳಾಗಿದ್ದರು. ಆ ನಂತರ ಮಮತಾರಿಗೆ ಕೆಲ ವರ್ಷಗಳ ಹಿಂದೆ ಲೋಕೇಶ್ ಎಂಬಾತನೊಂದಿಗೆ ವಿವಾಹವಾಗಿತ್ತು. ದಂಪತಿಗೆ 6 ವರ್ಷದ ಗಂಡು ಮಗು ಇದ್ದು, ಸಿಡೇದಹಳ್ಳಿಯಲ್ಲಿ ವಾಸವಿದ್ದರು. ಲೋಕೇಶ್ ಫುಡ್ ಡಿಲಿವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ಬುಧವಾರ ಪತ್ನಿಗೆ ಲೋಕೇಶ್ ಕರೆ ಮಾಡಿದಾಗ ಅವರು ಕಾಲ್ ರಿಸೀವ್ ಮಾಡಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ಕರೆ ಮಾಡಿದ ವೇಳೆ ಮಮತಾ ಸಾವಿಗೆ ಶರಣಾಗಿರುವುದು ತಿಳಿದು ಬಂದಿದೆ.
ಹೈಸ್ಕೂಲ್‌ನ ಸಹಪಾಠಿಗಳಾದ ಅಶೋಕ್ ಮತ್ತು ಗಣೇಶ್, ಮಮತಾ ಅವರಿಗೆ ಕಿರುಕುಳ ನೀಡುತ್ತಿರುವ ವಿಚಾರವನ್ನು ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ರಾತ್ರಿ ವೇಳೆ ಅಶ್ಲೀಲವಾಗಿ ಮೆಸೇಜ್ ಮಾಡಿ ಹೊರಗಡೆ ಹೋಗೋಣ, ದೈಹಿಕವಾಗಿ ಸಹಕರಿಸು ಇಲ್ಲವಾದರೆ ನಿನ್ನ ಸಂಸಾರ ಹಾಳು ಮಾಡುತ್ತೇವೆ ಎಂದು ಆರೋಪಿಗಳು ಬೆದರಿಸುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


