ರಂಜಾನ್ ಉಪವಾಸ ಆರಂಭ ಗೊಂಡಿದೆ. ಈ ಮಧ್ಯೆಯೇ ಉತ್ತರಪ್ರದೇಶದ ಸಹರಾನ್ ಪುರದಲ್ಲೊಂದು ಅಪರೂಪದ ಘಟನೆ ಬಗ್ಗೆ ವರದಿಯಾಗಿದೆ. ಹೌದು, ಮುಸ್ಲಿಂ ಯುವಕರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಪ್ರಕರಣ ನಡೆದಿರುವುದಾಗಿ ವರದಿಯಾಗಿದೆ.
ಮೊಹಮ್ಮದ್ ಸಾಜಿದ್ ಎಂಬಾತ ತನ್ನ ಹಿಂದೂ ಧರ್ಮದ ಪತ್ನಿಗೆ ಮುಸ್ಲಿಂ ಯುವಕರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎನ್ನಲಾಗುತ್ತಿದೆ.ಮೊಹಮ್ಮದ್ ಸಾಜಿದ್ ಇದೀಗ ತನ್ನ ಹೆಸರನ್ನು ಸತ್ಬೀರ್ ರಾಣಾ ಎಂದು ಬದಲಾಯಿಸಿಕೊಂಡಿದ್ದಾನೆ. ಈ ಬೆಳವಣಿಗೆಯ ನಂತರ ಸತ್ಬೀರ್ ಮತ್ತು ಪತ್ನಿ ಅನಿತಾ ಜತೆಯಾಗಿ ಹಿಂದೂ ಧಾರ್ಮಿಕ ವಿಧಿ ವಿಧಾನ ನೆರವೇರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನನ್ನ ಪತ್ನಿ ಹಿಂದೂ ಎಂಬ ಕಾರಣಕ್ಕಾಗಿಯೇ ಕೆಲವು ವರ್ಷಗಳಿಂದ ಸ್ಥಳೀಯ ಜನರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಈ ಕಾರಣದಿಂದಾಗಿಯೇ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾಜಿದ್ ಅಲಿಯಾಸ್ ರಾಣಾ ತಿಳಿಸಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ. ಸಹರಾನ್ ಪುರದ ನಕುಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಮೊಹಮ್ಮದ್ ಸಾಜಿದ್ (36ವರ್ಷ) ಸುಮಾರು ನಾಲ್ಕು ವರ್ಷದ ಹಿಂದೆ ಹಿಂದೂ ಮಹಿಳೆ ಅನಿತಾ ಎಂಬಾಕೆಯನ್ನು ವಿವಾಹವಾಗಿದ್ದ.
ಹಿಂದೂ ಮಹಿಳೆಯನ್ನು ವಿವಾಹವಾಗಿದ್ದಕ್ಕೆ ಮನೆಯನ್ನು ಬಿಡುವಂತೆ ಮಾಡಿದ್ದು, ನಂತರ ಬಾಡಿಗೆ ಮನೆಯಲ್ಲಿ ವಾಸ ಮಾಡಲು ಆರಂಭಿಸಿರುವುದಾಗಿ ಸಾಜಿದ್ ತಿಳಿಸಿದ್ದಾರೆ.ಈ ಕಿರುಕುಳದಿಂದ ಬೇಸತ್ತು ಹಿಂದೂ ಧಾರ್ಮಿಕ ಸಂಘಟನೆಗಳ ಜತೆ ತನ್ನ ಸಮಸ್ಯೆಯನ್ನು ಹೇಳಿಕೊಂಡಿದ್ದ.ಅದರಂತೆ ಸಹರಾನ್ ಪುರದ ಅವಾಸ್ ವಿಕಾಸ್ ಹರಿ ಮಂದಿರದಲ್ಲಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಸಾಜಿದ್ ಅಲಿಯಾಸ್ ರಾಣಾ ತಿಳಿಸಿರುವುದಾಗಿ ವರದಿ ವಿವರಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


