ಸಿರಾ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬನವರಿಗೆ ಸಿರಾ ನಗರದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪ ಸಂತೆಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಶಾಸಕರಾರ ಡಾ.ಸಿ.ಎಂ.ರಾಜೇಶ್ ಗೌಡ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹರೇಕಳ ಹಾಜಬ್ಬನವರನ್ನು ಸನ್ಮಾನಿಸಿ ಗೌರವಿಸಿದರು. ಹರೇಕಳ ಹಾಜಬ್ಬನವರು ಕಿತ್ತಳೆ ಹಣ್ಣಗಳನ್ನು ಮಾರಿ ತನ್ನ ಊರಾದ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳದ ಬಡ ಮಕ್ಕಳಿಗೆ ಒಂದು ಶಾಲೆಯನ್ನೇ ಕಟ್ಟಿಸಿದವರು. ಅವರ ಈ ಸಾಧನೆಗೆ ಪದ್ಮಶ್ರೀ ಪ್ರಶಸ್ತಿಗೆ ಅವರು ಪಾತ್ರರಾಗಿ, ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಿದ್ದರು.
ಸಿರಾದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ವರ್ಧಮಾನ್ ಪಬ್ಲಿಕ್ ಶಾಲೆಯ ಸಂಜಯ್ ಕುಮಾರ್ ಕಪಿಲ್ ದೇವ್ ಮತ್ತು ಶಾಲಾ ಶಿಕ್ಷಕರು ಸಿಬ್ಬಂದಿ ವರ್ಗದವರು ಹಾಜರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700