ಹರಿದ್ವಾರ: ಗಂಗಾನದಿಯ ನೀರು ಕುಡಿಯಲು ಯೋಗ್ಯವಲ್ಲ, ಸ್ನಾನ ಮಾಡಬಹುದು ಎಂದು ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿ ಹೇಲಿದೆ. ಉತ್ತರ ಪ್ರದೇಶ ಗಡಿಯಲ್ಲಿ ಬರುವ ಗಂಗಾ ನದಿಯಲ್ಲಿ ಪ್ರತಿ ವರ್ಷ 8 ಕಡೆ ನೀರನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತದೆ. ನವೆಂಬರ್ ತಿಂಗಳ ಪರೀಕ್ಷೆಯಲ್ಲಿ ಗಂಗಾ ನದಿಯ ನೀರು ‘ಬಿ’ ಕೆಟಗರಿ ಎಂದು ಕಂಡುಬಂದಿದೆ.
ನದಿಯ ನೀರನ್ನು ಐದು ವರ್ಗಗಳಾಗಿ ವಿಂಗಡಿಸಲಾಗಿದೆ. ‘ಎ’ ಕೆಟಗರಿ ಕನಿಷ್ಠ ವಿಷಕಾರಿಯಾಗಿದೆ. ಅಂದರೆ ನೀರನ್ನು ಸೋಂಕುನಿವಾರಣೆಗೊಳಿಸಿದ ನಂತರ ಕುಡಿಯಲು ಬಳಸಬಹುದು. ‘ಇ’ ಕೆಟಗರಿ ಅತ್ಯಂತ ವಿಷಕಾರಿಯಾಗಿದೆ ಎಂದು ಯುಕೆಪಿಸಿಬಿಯ ಪ್ರಾದೇಶಿಕ ಅಧಿಕಾರಿ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.
ಗಂಗಾ ನದಿಯ ಮಾಲಿನ್ಯ ಹೆಚ್ಚಾಗುತ್ತಿರುವ ಬಗ್ಗೆ ಸ್ಥಳೀಯ ಅರ್ಚಕ ಉಜ್ಜಲ್ ಪಂಡಿತ್ ಸಹ ಕಳವಳ ವ್ಯಕ್ತಪಡಿಸಿದ್ದಾರೆ. ಮಾನವರ ತ್ಯಾಜ್ಯದಿಂದ ಗಂಗೆ ಮಲಿನಗೊಳ್ಳುತ್ತಿದ್ದಾಳೆ ಎಂದಿದ್ದಾರೆ.
ಕೇವಲ ಗಂಗಾಜಲದಿಂದ ಸ್ನಾನ ಮಾಡುವುದರಿಂದ ನಮ್ಮ ದೇಹದ ರೋಗಗಳು ವಾಸಿಯಾಗುತ್ತದೆ. ಅದರಿಂದ ಕ್ಯಾನ್ಸರ್‌ನಂತಹ ರೋಗಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಇದೆ. ಈಗ ಗಂಗಾಜಲ ಅಶುದ್ಧವಾಗಿರುವುದಕ್ಕೆ ಮಾನವ ತ್ಯಾಜ್ಯದಿಂದ ಆಗಿದ್ದು, ಅದನ್ನು ನಾವು ಬದಲಾಯಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx