ಬೆಂಗಳೂರು: ಕರ್ತವ್ಯನಿರತ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯ ಎಎಸ್ ಐ ಒಬ್ಬರಿಗೆ ನಿಂದಿಸಿದ ಆರೋಪದಡಿ ವಸ್ತ್ರ ವಿನ್ಯಾಸಕ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಸೋಮನ ಬಿದ್ದಪ್ಪ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಪೊಲೀಸ್ ಅಧಿಕಾರಿಗೆ ನಿಂದನೆ ಆರೋಪದಡಿ ಈ ಪ್ರಕರಣ ದಾಖಲಾಗಿದೆ. ಈ ಹಿಂದೆ ಇದೇ ಪೊಲೀಸ್ ಠಾಣೆಯಲ್ಲಿ ಅತೀ ವೇಗದ ಕಾರು ಚಾಲನೆ ಹಾಗೂ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.


