ಸರಗೂರು: ಕಾಡಾನೆಗಳು ದಾಳಿ ನಡೆಸಿ ಹತ್ತಿ ಬೆಳೆ ನಾಶ ಮಾಡಿರುವ ಘಟನೆ ತಾಲ್ಲೂಕಿನ ಹಳೆಯೂರು ಗ್ರಾಮದ ಜಮೀನುವೊಂದರಲ್ಲಿ ನಡೆದಿದೆ.
ಗ್ರಾಮದ ಗಣೇಶ್ ಎಂಬ ರೈತರು ತಮ್ಮ ಸುಮಾರು 6 ಎಕೆರೆ ಜಮೀನಿನಲ್ಲಿ ಹತ್ತಿ ಬೆಳೆ ಬೆಳೆದಿದ್ದರು. ಆದರೆ ಕಾಡಾನೆಗಳು ಜಮೀನಿಗೆ ದಾಳಿ ಮಾಡಿದ್ದು, ಸುಮಾರು 2 ಎಕರೆ ಹತ್ತಿ ಬೆಳೆ ನಾಶವಾಗಿದೆ. ಇದರಿಂದಾಗಿ ತಮಗೆ ಸುಮಾರು 1.50 ಲಕ್ಷದಷ್ಟು ನಷ್ಟ ಉಂಟಾಗಿದೆ ಎಂದು ರೈತ ಗಣೇಶ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಮೊಳೆಯೂರು ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


