ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ಇಂದು ಗುಡುಗು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಭಾರಿ ಮಳೆಯ ಸಂಭವ ಇದೆ.ನಗರದಲ್ಲಿ ಬಲವಾದ ಮೇಗಾಳಿ ಬೀಸುವ ಸಾಧ್ಯತೆ ಇದೆ. ನಗರದ ಸುತ್ತಮುತ್ತಲಿನ ಪ್ರದೇಶದಲ್ಲೂ ವರುಣ ಅಬ್ಬರಿಸಲಿದ್ದಾನೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಹಾಸನ, ಚಾಮರಾಜನಗರ,ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೊಂದು ಪ್ರದೇಶಗಳಲ್ಲೂ ಮಳೆಯಾಗುವ ಸಂಭವವಿದೆ.
ಮುಂದಿನ ಮೂರು ದಿನ ಅಂದರೆ ಜೂನ್ 19 ರಿಂದ 21ರವರೆಗೆ ರಾಜ್ಯದ ಹಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


