ತುಮಕೂರು: ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ವ್ಯಕ್ತಿ ಹಾವಿಗೆ ಬಲಿಯಾದ ಘಟನೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪೆದ್ದಯ್ಯ(45) ಮೃತ ದುರ್ದೈವಿಯಾಗಿದ್ದಾರೆ. ಇವರು ಜಾನುವಾರುಗೆ ಮೇವು ತರಲು ಹೋಗಿದ್ದ ವೇಳೆ ಹಾವು ಕಚ್ಚಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA