ತುಮಕೂರು : ಬೈಕ್ ನಲ್ಲಿ ನಾಗರಹಾವು ಇದ್ದರೂ ಸವಾರನಿಗೆ ತಿಳಿಯಲೇ ಇಲ್ಲ. ಒಂದೂವರೆ ಕಿಲೋಮೀಟರ್ ಪ್ರಯಾಣಿಸಿದ ಬಳಿಕ ಹಾವು ಇರುವುದು ಬೆಳಕಿಗೆ ಬಂದಿದ್ದು, ಬಳಿಕ ಹಾವನ್ನು ಹೊರ ತೆಗೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ನಗರದ ರಂಗಾಪುರ ಬಡಾವಣೆಯಲ್ಲಿ ಶರತ್ ಎಂಬುವವರ ಬೈಕ್ ನಲ್ಲಿ ನಾಗರಹಾವು ಸೇರಿಕೊಂಡಿತ್ತು. ಹಾವನ್ನು ಕಂಡು ಭಯ ಭೀತರಾದ ಶರತ್, ವಾರಂಗಲ್ ವನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣೆ ಸಂಸ್ಥೆಗೆ ಕರೆ ಮಾಡಿದರು.
ಸಂಸ್ಥೆಯ ಉರಗ ತಜ್ಞ ದಿಲೀಪ್ ಸ್ಥಳಕ್ಕೆ ಭೇಟಿ ನೀಡಿ ದ್ವಿಚಕ್ರ ವಾಹನವನ್ನು ಪರಿಶೀಲನೆ ಮಾಡಿದರು. ನಂತರ ಬೈಕ್ ಅನ್ನು ಒಂದು ಕಿಲೋಮೀಟರ್ ದೂರದಲ್ಲಿ ಇರುವ ಬೈಕ್ ಗ್ಯಾರೇಜ್ ಗೆ ಕೊಂಡೊಯ್ದುರು.
ಬೈಕ್ ಪಾರ್ಟ್ಸ್ ಗಳನ್ನು ಬಿಚ್ಚಿ ಅರ್ಧಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಸೇರಿಕೊಂಡಿದ್ದ ಹಾವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ದೇವರಾಯನ ದುರ್ಗ ಅರಣ್ಯಕ್ಕೆ ರವಾನಿಸಿದರು.
ವರದಿ : ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz