ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಹಾಸನದಿಂದಲೇ ಸ್ಪರ್ಧೆ ಮಾಡಿದರೇ ಜೆಡಿಎಸ್ ಕಾರ್ಯಕರ್ತರಿಗೆ ಸ್ಪೂರ್ತಿ ಜೊತೆಗೆ ಉಳಿದ ಅಭ್ಯರ್ಥಿಗಳಿಗೂ ಶಕ್ತಿ ನೀಡಿದಂತಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹಾಸನದಿಂದ ಸ್ಪರ್ಧೆ ಮಾಡಿದರೆ ಒಳ್ಳೆಯದು. ಇದರಿಂದ ಇಡೀ ರಾಜ್ಯದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು, ಕಾರ್ಯಕರ್ತರನ್ನು ಹುರಿದುಂಬಿಸಿದಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ, ಹಾಸನ ಕ್ಷೇತ್ರಗಳು ಜೆಡಿಎಸ್ ಪಾಲಾಗುತ್ತದೆಯೇ ಎಂಬ ಪ್ರಶ್ನೆಗೆ, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ನಮ್ಮ ತಾತ ಡಿಕ್ಲೇರ್ ಮಾಡಿದರೆ.. ಲೋಕಸಭೆ ಚುನಾವಣೆಯಲ್ಲಿ ಹೆಚ್ ಡಿಕೆ ಸ್ಪರ್ಧಿಸಲಿ ಎಂದು ಉತ್ತರಿಸಿದರು. ಲೋಕಸಭೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರದಲ್ಲಿ ನನಗೆ ಮಾಹಿತಿಯಿಲ್ಲ. ನನಗೇನೂ ಗೊತ್ತಿಲ್ಲ. ನಮ್ಮ ಜಿಲ್ಲೆ ಬಿಟ್ಟು ಹೊರಗಡೆ ಜಿಲ್ಲೆಯ ಬಗ್ಗೆ ಮಾಹಿತಿಯಿಲ್ಲ ಎಂದು ಸುಮ್ಮನಾದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


