ಚಿಕ್ಕಬಳ್ಳಾಪುರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಗು ಇದ್ದಂತೆ, ಚಾಕ್ಲೇಟ್ ಯಾರು ಕೊಡ್ತಾರೋ ಅವರ ಕಡೆಗೆ ಹೋಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಧರಣಿಯಿಂದ ಜೆಡಿಎಸ್ ದೂರವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬೆಲೆ ಏರಿಕೆ ವಿಚಾರಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ತಾಕತ್ ಇದ್ರೆ, ಕೇಂದ್ರದಲ್ಲಿ ಪೆಟ್ರೋಲ್ ಬೆಲೆ ಇಳಿಸಲು ಹೇಳಿ. ಬಿಜೆಪಿಯವರಿಗೆ ಏನಾದ್ರು ಇದ್ರೆ ನಮ್ಮ ಜಿಎಸ್ ಟಿ ಹಣ ಕೊಡಿಸಲಿ. ಸದಾ ಸುದ್ದಿಯಲ್ಲಿರಲು ಬಿಜೆಪಿಯವರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿರುವಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಕ್ರಮ ಹಣ ಮಾಡಿಲ್ಲ. ವಿಜಯೇಂದ್ರ ಮೇಲೆ ಆರೋಪಗಳು ಇವೆ. ಅದನ್ನು ಬಿಟ್ಟು ಸಿದ್ದರಾಮಯ್ಯ ವಿರುದ್ಧ ಮಾತಾಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4