ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮೊದಲ ದಿನ ಊಟ ಹಾಗೂ ನಿದ್ದೆಯಿಲ್ಲದೆ ಕಳೆದಿದ್ದಾರೆ.
ಸೆಂಟ್ರಲ್ ಜೈಲಿನ ಕ್ವಾರಂಟೈನ್ ಸೆಲ್ ನಲ್ಲಿ ಒಂದು ರಾತ್ರಿ ಕಾಲ ಕಳೆದಿರುವ ರೇವಣ್ಣ, ಕಳೆದ ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್, ಸಾಂಬಾರ್ ತಡವಾಗಿ ಸೇವಿಸಿದ್ದಾರೆ.
ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಶರಣಾಗಿದ್ದರು. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಏಕಾಂಗಿಯಾಗಿ ತಮಗೆ ಬಂದೊಗಿದ ಪರಿಸ್ಥಿತಿಯ ಬಗ್ಗೆ ಸಂಕಟ ಅನುಭಸುತ್ತಿದ್ದರು. ಸುಮಾರು ಹೊತ್ತಿನ ನಂತರ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದರು ಎಂದು ಜೈಲಿನ ಮೂಲಗಳು ತಿಳಿಸಿವೆ.
ರೇವಣ್ಣ ಆರೋಗ್ಯ ಸರಿ ಇಲ್ಲದ ಕಾರಣ ರಾತ್ರಿ ಜೈಲಾಧಿ ಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.
ಇಂದು ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ. ನಂತರ ಎದ್ದು ಎಂದಿನಂತೆ ಜೈಲಿನಲ್ಲೇ ವಾಯೂ ವಿಹಾರ ನಡೆಸಿ ಪೇಪರ್ ಓದಿ ಪುಳಿಯೊಗರೆ ಸೇವಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296