ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು. ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ? ಎಂದು ಪ್ರಶ್ನೆ ಮಾಡಿದರು.
ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. 135 ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರ್ಕಾರ ನಿಮ್ಮದಲ್ಲವೇ?? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ? ಎಂದು ಸವಾಲು ಹಾಕಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


