ನವದೆಹಲಿ: ವ್ಯಕ್ತಿಯೊಬ್ಬ ಕಾಮತೃಷೆ ತೀರಿಸಿಕೊಳ್ಳಲು ಬೀದಿ ನಾಯಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿ ಶಾಹದಾರ ಪ್ರದೇಶದಲ್ಲಿ ನಡೆದಿದ್ದು, ಸದ್ಯ 36 ವರ್ಷ ವಯಸ್ಸಿನ ಕಾಮುಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 7 ರಂದು ಈ ಘಟನೆ ನಡೆದಿದೆ. ಪ್ರಾಣಿ ದಯಾ ಸಂಘದ ಸದಸ್ಯೆ ರೇಣು ಎಂಬುವರು ನೀಡಿದ ದೂರಿನ ನಂತರ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 7 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಕೈಲಾಶ್ ನಗರದ ನಾಲಾ ಪ್ರದೇಶದ ಸ್ಟ್ರೀಟ್ ನಂ. 15 ರ ಬಳಿ ವ್ಯಕ್ತಿಯೊಬ್ಬ ಬೀದಿನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅವರು ಆರೋಪಿಸಿರುವುದಾಗಿ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325 (ಪ್ರಾಣಿಗಳನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ ಮೂಲಕ ದುಷ್ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿ ಮೊಹಲ್ಲಾ ಗಾಂಧಿ ನಗರದ ನಿವಾಸಿ ನೌಶಾದ್ ಎಂಬಾತನನ್ನು ಬಂಧಿಸಲಾಗಿದೆ
ಈತ ಆ ಪ್ರದೇಶದಲ್ಲಿ ನೀರು ಸರಬರಾಜುದಾರನಾಗಿ ಕೆಲಸ ಮಾಡುತ್ತಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW