ಚಾಮರಾಜನಗರ: ಅನೈತಿಕ ಸಂಬಂಧ ಹಿನ್ನಲೆ ಅಣ್ಣನನ್ನು ಚಾಕುವಿನಿಂದ ಇರಿದು ತಮ್ಮ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಳ್ಳಿ ಗ್ರಾಮದಲ್ಲಿ ಜರುಗಿದೆ. ಚೌಡಳ್ಳಿ ಗ್ರಾಮದ ಪ್ರಸಾದ್( 45) ಮೃತಪಟ್ಟ ದುರ್ದೈವಿ ಎನ್ನಲಾಗಿದೆ. ಚೌಡಳ್ಳಿ ಗ್ರಾಮದ ಅವಿವಾಹಿತ ಕುಮಾರ್ ಅಣ್ಣನ ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ.
ಆರೋಪಿ ಕುಮಾರ ಎಂಬಾತ ಅಣ್ಙ ಪ್ರಸಾದ ಪತ್ನಿ( ಅತ್ತಿಗೆ) ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗದಿರಲಿ ಎಂದು ಯೋಜನೆ ರೂಪಿಸಿ ಅಣ್ಣನನ್ನು ಆರೋಪಿ ಕುಮಾರ್ ಕೊಲೆ ಮಾಡಿದ್ದಾನೆ. ಶನಿವಾರ ತಡರಾತ್ರಿ ಘಟನೆ ಸಂಭವಿಸಿದೆ. ಕೊಲೆ ಮಾಡಿದ 2 ಗಂಟೆಯಲ್ಲಿಯೇ ಆರೋಪಿಯನ್ನು ಗುಂಡ್ಲುಪೇಟೆ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಕೊಲೆ ಮಾಡಿ ಪರಾರಿಯಾಗಲು ಆರೋಪಿ ಕುಮಾರ್ ಯತ್ನಿಸಿದ್ದ. ಗುಂಡ್ಲುಪೇಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


