ಒಡಿಶಾ: ಕೇಂದ್ರಪಾರಾ ಜಿಲ್ಲೆಯಲ್ಲಿ ಖಾಸಗಿ ಶಾಲೆಯೊಂದರ 45 ವರ್ಷದ ಮುಖ್ಯೋಪಾಧ್ಯಾಯರನ್ನು, ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಹೆಡ್ ಮಾಸ್ಟರ್, ಜನವರಿ 16 ರಂದು ಶಾಲೆಯಲ್ಲಿ 13 ವರ್ಷದ 7ನೇ ತರಗತಿಯ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಬಾಲಕಿಯರು ಶಾಲೆಗೆ ಹೋಗಲು ನಿರಾಕರಿಸಿದ್ದು, ಏಕೆ ಶಾಲೆಗೆ ಹೋಗುತ್ತಿಲ್ಲ ಎಂದು ಅವರ ಪೋಷಕರು ಕೇಳಿದಾಗ ಈ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ 376, 354, 506 ಮತ್ತು ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಜಯ ಕುಮಾರ್ ಜೆನಾ ಅವರು ಹೇಳಿದ್ದಾರೆ.
