ತುಮಕೂರು: ಸಾರಿಗೆ ಇಲಾಖೆ, ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ವಾಸನ್ ಐ ಕೇರ್ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಫೆಬ್ರವರಿ 5ರಂದು ಬೆಳಿಗ್ಗೆ 11 ಗಂಟೆಗೆ “ಆರೋಗ್ಯ ಜಾಗೃತಿ ಮತ್ತು ತಪಾಸಣಾ ಶಿಬಿರ ಹಾಗೂ ಜಾಗೃತಿ ನಡಿಗೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವು ನಗರದ ಬಿ.ಹೆಚ್.ರಸ್ತೆಯಲ್ಲಿರುವ ಆರ್ ಟಿಓ ಕಚೇರಿಯಲ್ಲಿ ನಡೆಯಲಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸುವರು. ಅಪರ ಸಾರಿಗೆ ಆಯುಕ್ತ(ಪ್ರವರ್ತನ) ಸಿ.ಮಲ್ಲಿಕಾರ್ಜುನ ಅಧ್ಯಕ್ಷತೆವಹಿಸುವರು.
ಶಿಬಿರದಲ್ಲಿ ಉಚಿತವಾಗಿ ಬಿಪಿ, ಸಕ್ಕರೆ ಕಾಯಿಲೆ, ಇಸಿಜಿ, ಕಂಪ್ಯೂಟರೈಸ್ಡ್ ಕಣ್ಣಿನ ಪರೀಕ್ಷೆಯನ್ನು ಮಾಡಲಾಗುವುದು. ವಾಹನ ಮಾಲೀಕರು ಮತ್ತು ಚಾಲಕರು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎ.ವಿ. ಪ್ರಸಾದ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx