ಬೆಂಗಳೂರು: ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿರುದ್ಧ ವಾಗ್ದಾಳಿ ನಡೆದಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಬಿಮ್ಸ್ ನಲ್ಲಿ ಕಳಪೆ ಐವಿ ಡ್ರಾಪ್ ನಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ ಎಂದು ಆರೋಪಿಸಿದರು.
ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆ ಆಗಿದೆ. ಐವಿ ಡ್ರಾಪ್ ಕಳಪೆ ಎಂದು ಗೊತ್ತಾದ ಮೇಲೂ ಇಂದು ಮತ್ತೊಂದು ಸಾವು ಸಂಭವಿಸಿದೆ. ಇಷ್ಟೆಲ್ಲ ಆದರೂ ಆರೋಗ್ಯ ಸಚಿವರು, ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ನಡೆದ ಘಟನೆ ಬಗ್ಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅತ್ತಿದ್ದೇ ಅತ್ತಿದ್ದು, ರಾಹುಲ್ ಗಾಂಧಿ ಸೇರಿ ಎಲ್ಲರೂ ಟವಲ್ ತಗೊಂಡು ಒರೆಸಿಕೊಂಡಿದ್ರು. ಕಣ್ಣೀರು ಬರದಿದ್ದರು ಒರೆಸಿಕೊಳ್ಳುತ್ತಿದ್ದರು. ಈಗ ಬಾಣಂತಿಯರು ಸಾವನ್ನಪ್ಪಿದ್ದಾರೆ. ಬಾಣಂತಿಯರು ಮೃತಪಟ್ಟಾಗ ಕಣ್ಣೀರು ಬರಲಿಲ್ವಾ? ಒಂದು ಸಿಂಗಲ್ ಡ್ರಾಪ್ ಕಣ್ಣೀರು ಬರೋದು ಬೇಡ್ವಾ? ಅಂತ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx