nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಬ್ಬಂದಿಯ ಕೊರತೆಯಿಂದ ಆರೋಗ್ಯ ಸೇವೆ ಸಿಗುತ್ತಿಲ್ಲ: ರೈತ ಮುಖಂಡರಿಂದ ಪ್ರತಿಭಟನೆ
    ಜಿಲ್ಲಾ ಸುದ್ದಿ May 6, 2024

    ಸಿಬ್ಬಂದಿಯ ಕೊರತೆಯಿಂದ ಆರೋಗ್ಯ ಸೇವೆ ಸಿಗುತ್ತಿಲ್ಲ: ರೈತ ಮುಖಂಡರಿಂದ ಪ್ರತಿಭಟನೆ

    By adminMay 6, 2024No Comments2 Mins Read
    pavagada

    ಪಾವಗಡ: ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ, ಸಿಬ್ಬಂದಿ ಕೊರತೆಯಿಂದಾಗಿ ಆರೋಗ್ಯ ಸೇವೆ ಸಿಗುತ್ತಿಲ್ಲ ಎಂದು ಆರೋಪಿಸಿ, ತಾಲ್ಲೂಕು ಕಛೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿ, ಅಗತ್ಯ ಸಿಬ್ಬಂದಿ ಒದಗಿಸಬೇಕೆಂದು ರೈತ ಸಂಘದ ಮುಖಂಡರು ಆಗ್ರಹಿಸಿದರು. ತಾಲ್ಲೂಕು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ನವರ ನೇತೃತ್ವದಲ್ಲಿ ತಹಶೀಲ್ದಾರ್ ರವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.

    ಇದೇ ವೇಳೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಡಿ, ಪಾವಗಡದಲ್ಲಿ ಘನ ಸರ್ಕಾರದ ಸರ್ಕಾರಿ ಆಸ್ಪತ್ರೆ ನೂತನವಾಗಿ ಕಟ್ಟಡ ನಿರ್ಮಾಣವಾಗಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ 3 ಜನ ಡಾಕ್ಟರ್ ಗಳು ಇದ್ದು, ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಇಲ್ಲದೆ ಜನ ಪರದಾಡುವಂತೆ ಆಗಿದೆ. ಪಾವಗಡ ಸರ್ಕಾರಿ ಆಸ್ಪತ್ರೆಗೆ ಬೇಕಾಗಿರುವ ತಜ್ಞ ವೈದ್ಯರುಗಳ ಸಂಖ್ಯೆ ಮಂಜೂರು 10 ಹುದ್ದೆ, ಈಗ ಹಾಲಿ ಕೆಲಸ ಮಾಡುತ್ತಿರುವವರು ಸಂಖ್ಯೆ 3 ಜನರಿದ್ದಾರೆ. ತುರ್ತು ಚಿಕಿತ್ಸೆ ವೈದ್ಯಾಧಿಕಾರಿ 3 ಜನರು ಇರುವ ಕಡೆ ಒಬ್ಬರೂ ಇಲ್ಲ, ದಂತ ವೈದ್ಯರುಗಳಿಲ್ಲ, ಸಹಾಯಕ ಆಡಳಿತಾಧಿಕಾರಿ ಇಲ್ಲ, ಕಚೇರಿ ಅಧೀಕ್ಷಕರಿಲ್ಲ. ಪ್ರಥಮ ದರ್ಜೆ ಸಹಾಯಕರು 3 ಜನ ಇರುವ ಕಡೆ ಖಾಲಿ 2 ಹುದ್ದೆ, ದ್ವಿತೀಯ ದರ್ಜೆ ಸಹಾಯಕರು 3 ಜನ ಇರುವ ಕಡೆ ಖಾಲಿ 2 ಹುದ್ದೆ, ಹಿರಿಯ ಶುಶ್ರೂಷಕರು 2 ಇರುವ ಕಡೆ ಒಬ್ಬರೂ ಇಲ್ಲ.


    Provided by
    Provided by

    ಒಟ್ಟು ಹುದ್ದೆಗಳು 94, 27 ಜನರು ಕಾರ್ಯನಿರ್ವಹಿಸುತ್ತಿದ್ದು, 50 ಕ್ಕೂ ಹೆಚ್ಚು ಹುದ್ದೆ ಖಾಲಿ ಇರುವುದರಿಂದ ಪಾವಗಡ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಹಿಡಿಶಾಪ ಹಾಕುತ್ತಿದ್ದಾರೆ. ಆಸ್ಪತ್ರೆ ಸಿಬ್ಬಂಧಿ ಕೊರತೆಯಿಂದ ಗರ್ಭಿಣಿ ಸ್ತ್ರೀಯರಿಗೆ ಮತ್ತು ಹೆರಿಗೆಗೆ ಬಂದಿರುವ ಸ್ತ್ರೀಯರಿಗೆ ತುಮಕೂರು ಜಿಲ್ಲಾಸ್ಪತ್ರೆಗೆ ಮತ್ತು ಬೆಂಗಳೂರಿಗೆ ಕಳುಹಿಸಿಕೊಡುವ ಪ್ರಸಂಗ ಎದುರಾಗಿದೆ. ಹೊರರೋಗಿಗಳಿಗೆ ಮತ್ತು ಒಳರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೇ ಇರುವ ಕಾರಣ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವಂತಾಗಿದೆ. ನಿರ್ಗತಿಕರು, ಆರ್ಥಿಕವಾಗಿ ಹಿಂದುಳಿದಿರುವ ಜನರು ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯಲಾಗುತ್ತಿಲ್ಲ, ಆದ್ದರಿಂದ ಕೂಡಲೇ ಸಮರ್ಪಕ ಸಿಬ್ಬಂದಿ ಒದಗಿಸಿ ತಾಲ್ಲೂಕಿನ ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು, ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಮಾತ್ರೆಗಳು, ಚಿಕ್ಕಮಕ್ಕಳಿಗೆ ಟಾನಿಕ್, ಇಂಜೆಕ್ಷನ್ ಗಳು ಲಭ್ಯವಿಲ್ಲ ಎಂದು ಹೇಳಿ ಔಷಧಿಗಳಿಗೆ ಹೊರಗಡೆ ತರುವಂತೆ ಬರೆದು ಕೊಡುತ್ತಿದ್ದಾರೆ.

    ಆಸ್ಪತ್ರೆಗಳಲ್ಲಿ ಆಲ್ಫಾಸೌಂಡ್ ಸ್ಕ್ಯಾನಿಂಗ್ ಮತ್ತು ಶಸ್ತ್ರಚಿಕಿತ್ಸೆಗೆ ಬೇಕಾದ ಸಲಕರಣೆಗಳ ಕೊರತೆಯಿದೆ, ಆದ್ದರಿಂದ ಸರ್ಕಾರಿ ಆಸ್ಪತ್ರೆಗೆ ಬೇಕಾದ ವೈದ್ಯರು ಮತ್ತು ಸಿಬ್ಬಂದಿಗಳನ್ನು ಸಂಪೂರ್ಣವಾಗಿ ತುಂಬಬೇಕು. ಇಲ್ಲವಾದರೆ ಪಾವಗಡ ತಾಲ್ಲೂಕು ರೈತ ಸಂಘ ಮತ್ತು ಎಲ್ಲಾ ಪ್ರಗತಿಪರ ಸಂಘಟನೆಗಳು ನಿರಂತರ ಧರಣಿಯನ್ನು ಹಮ್ಮಿಕೊಳ್ಳಲಾಗುತ್ತದೆಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಹಲವು ರೈತ ಮುಖಂಡರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.