ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇದ್ದು, ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ. ಇದರ ನಡುವೆ ಇನ್ನೂ ಕೆಲವೇ ಹೊತ್ತಿನಲ್ಲಿ ಈ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲಿನ ಬೆಂದಿದ್ದ ರಾಜ್ಯ ರಾಜಧಾನಿ ಕಳೆದ ಎರಡು ದಿನಗಳಿಂದ ಸಂಜೆ ಹೊತ್ತಿಗೆ ಮಳೆರಾಯನ ಕೃಪೆಯಿಂದ ತಂಪಾಗಿದೆ. ಇನ್ನು ನಿನ್ನೆ ನಗರದಲ್ಲಿ ಮಧ್ಯಾಹ್ನದ ವೇಳೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಆದರೆ ಸ್ವಲ್ಪ ಹೊತ್ತಿನಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಬಂದಿದೆ. ಅರ್ಧ ಗಂಟೆ ಭರಪೂರ ಮಳೆ ಸುರಿದಿದೆ.
ಅಷ್ಟೇ ಅಲ್ಲದೆ, ಇನ್ನೂ ಕೆಲವೇ ಹೊತ್ತಿನಲ್ಲಿ ಗಡಿಜಿಲ್ಲೆ ಚಾಮರಾಜನಗರ, ಕೋಲಾರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆರಾಯ ಕಾಲಿಡಲಿದ್ದಾನೆ ಎಂದು ಬೆಂಗಳೂರು ಹವಾಮಾನ ಕಚೇರಿ ತನ್ನ ಅಧಿಕೃತ ಟ್ವೀಟ್ ಮೂಲಕ ಮಾಹಿತಿ ರವಾನಿಸಿದೆ. ಇನ್ನು ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ 5 ದಿನ ರೆಡ್ ಅಲರ್ಟ್ ನೀಡಿದೆ.
ರೆಡ್ ಅಲರ್ಟ್ ಪಡೆದ ಆಯಾ ಜಿಲ್ಲೆಗಳು:
ಹಲವೆಡೆ ಮಳೆಯಾದರೂ ರಾಜ್ಯದಲ್ಲಿ ಬಿಸಿಲಿನ ತಾಪ ಏರಿಕೆಯಾಗುತ್ತಲೇ ಇದ್ದು, ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ 5 ದಿನಗಳ ಕಾಲ ರೆಡ್ ಅಲರ್ಟ್ ಸಂದೇಶ ನೀಡಿದೆ. ಧಾರವಾಡ, ಬಾಗಲಕೋಟೆ, ಗದಗ, ಬೆಳಗಾವಿ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜತೆಗೆ ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಕಲಬುರ್ಗಿ, ಚಿತ್ರದುರ್ಗ ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA