ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದ ಎಂಟತ್ತು ದಿನಗಳಿಂದ ಅಬ್ಬರಿಸುತ್ತಿರೋ ಮಳೆರಾಯ, ರಾಜ್ಯದಾದ್ಯಂತ ಮುಂದಿನ ನಾಲ್ಕೈದು ದಿನ ಮತ್ತಷ್ಟು ಅಬ್ಬರಿಸುವ ಸಾಧ್ಯತೆಯಿದೆ. ರಾಜ್ಯದ ಅನೇಕ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ಕೂಡ ಇದ್ದು, ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಮೇಲ್ಮೈ ಸುಳಿಗಾಳಿ, ಟ್ರಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದ ಮೂರು ದಿನ ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಕರ್ನಾಟಕದ ಭಾಗಗಳಿಗೆ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ.
ಜೊತೆಗೆ ಬಹುತೇಕ ಕಡೆ ಮಳೆ ಜೊತೆಗೆ ಬಿರುಗಾಳಿ ಸಹಿತ ಮಳೆ, ಗುಡುಗು ಮಿಂಚಿನ ಎಚ್ಚರಿಕೆ ಕೂಡ ನೀಡಲಾಗಿದೆ. ಬೆಂಗಳೂರಿನಲ್ಲೂ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದ್ದು, ಮುಂದಿನ ಒಂದು ವಾರ ನಗರದ ಹಲವೆಡೆ ಭಾರಿ ಮಳೆಯ ನಿರೀಕ್ಷೆ ಮಾಡಲಾಗಿದೆ. ಹಲವೆಡೆ ಭಾರೀ ಗುಡುಗು ಸಹಿತ ಮಳೆಯ ಅಬ್ಬರ ಎಚ್ಚರಿಕೆಯನ್ನ ಕೂಡ ಹವಾಮಾನ ಇಲಾಖೆ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


