ಕರ್ನಾಟಕಕ್ಕೆ ಮುಂದಿನ 7 ದಿನ ಮಳೆ ಅಬ್ಬರಿಸಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಲಿದೆ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.
ಮತ್ತೊಂದು ಕಡೆ ಕರ್ನಾಟಕದ ಬಹುತೇಕ ಕೆರೆಗಳು & ಹಳ್ಳಕೊಳ್ಳ ತುಂಬಿ ಹರಿಯುತ್ತಿವೆ. ಹೀಗಿದ್ದಾಗಲೇ ಕರಾವಳಿ ಜಿಲ್ಲೆಗಳಾದ ಉಡುಪಿ & ದಕ್ಷಿಣ ಕನ್ನಡದಲ್ಲಿ ಭಾರಿ ಭರ್ಜರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೇ ಉತ್ತರ ಕನ್ನಡದ ಹಲವು ಪ್ರದೇಶಗಳಲ್ಲಿ ಭರ್ಜರಿ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಕಾವೇರಿ ತವರು ಕೊಡಗು ಜಿಲ್ಲೆ ಸೇರಿ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು & ಉಡುಪಿ, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು & ಹಾಸನ ಜಿಲ್ಲೆಯ ಬಹುತೇಕ ಭಾಗದಲ್ಲಿ ಭರ್ಜರಿ ಮಳೆ ಆಗಲಿದೆ. ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗೆ ಭರ್ಜರಿ ಮಳೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಉತ್ತರ ಕರ್ನಾಟಕದಲ್ಲೂ ಮಳೆ ಅಬ್ಬರ ತೋರಿಸಲಿದ್ದು, ಉತ್ತರ ಕರ್ನಾಟಕದ ವಿಜಯಪುರ & ಕಲಬುರಗಿ, ರಾಯಚೂರು ಸೇರಿ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ & ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸಲಿದೆ. ಹೀಗಾಗಿ ಭಾರಿ ಮಳೆಯ ಪರಿಣಾಮ ನಗರ ಪ್ರದೇಶಗಳಲ್ಲಿ ನೀರು ನಿಂತು ಸಾಕಷ್ಟು ಸಮಸ್ಯೆ ಆಗುವ ಸಾಧ್ಯತೆ ಇದ್ದು ಸ್ಥಳೀಯ ಆಡಳಿತಗಳು ಸಮಸ್ಯೆ ಸರಿ ಮಾಡಲು ಅಲರ್ಟ್ ಆಗಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


