nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    • ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ
    • ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    ತುಮಕೂರು April 26, 2025

    ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    By adminApril 26, 2025No Comments2 Mins Read
    shubhakalyan

    ತುಮಕೂರು:  ಜಿಲ್ಲೆಯಲ್ಲಿ ಶೇ.76ರಷ್ಟು ಅಧಿಕ ಮಳೆಯಾಗಿದ್ದು, ಪ್ರಸ್ತುತ ಪೂರ್ವ-ಮುಂಗಾರು ಹಂಗಾಮು ಪ್ರಾರಂಭವಾಗಿದೆ. ಪೂರ್ವ ಮುಂಗಾರು ಅವಧಿಯಲ್ಲಿ ಈವರೆಗೆ ಹೆಚ್ಚಿನದಾಗಿ ಸಿಡಿಲು-ಗುಡುಗು ಮತ್ತು ಭಾರಿ ವೇಗದ ಗಾಳಿ-ಮಳೆಯಾಗುವ ಸಾಧ್ಯತೆಯಿರುವುದರಿಂದ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಪ್ರವಾಹ/ಭಾರಿ ಮಳೆಯಿಂದ ಯಾವುದೇ ಜನ–ಜಾನುವಾರು ಜೀವಹಾನಿಯಾಗದಂತೆ ಮುಂಜಾಗ್ರತೆವಹಿಸಬೇಕು. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ವಾರ್ಡ್/ಅಂಡರ್ ಪಾಸ್/ರಸ್ತೆಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಅರ್ಹ ಪ್ರಕರಣಗಳಿಗೆ ನಿಯಮಾನುಸಾರ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ತುರ್ತು ಪರಿಹಾರ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.


    Provided by
    Provided by

    ಸಾರ್ವಜನಿಕರಲ್ಲಿ ಮನವಿ :

    ಜಿಲ್ಲೆಯಲ್ಲಿ ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ ಸಾರ್ವಜನಿಕರಿಗೆ ಎಸ್‌ಎಂಎಸ್ ಅಲರ್ಟ್ ರವಾನಿಸಲಾಗುವುದು. ಸಾರ್ವಜನಿಕರು ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚು ಎಚ್ಚರದಿಂದಿರಬೇಕು. ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಬೇಕು. ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಮನೆಗಳು, ಮರ, ವಿದ್ಯುತ್ ಉಪಕರಣ/ಸರಬರಾಜು, ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಸೇರಿದಂತೆ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸಬಾರದು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದAತೆ, ಜನ ಸಂದಣಿಯಾಗದಂತೆ ಅಂತರ ಕಾಪಾಡಬೇಕು. ತುರ್ತು ಚಿಕಿತ್ಸೆಗೆ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿಯನ್ನು ಹೊಂದಿರಬೇಕೆಂದು ಅವರು ಮನವಿ ಮಾಡಿದ್ದಾರೆ.

    ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ–ಕರುಗಳನ್ನು ತೊಳೆಯುವುದು ಹಾಗೂ ಫೋಟೋ/ಸೆಲ್ಫಿಗಳನ್ನು ತೆಗೆಯುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಎಚ್ಚರವಹಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಅಪಾಯಕಾರಿಯಾಗಿ ಹರಿಯುವ ನೀರು ಮತ್ತು ಕೆರೆ/ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರಬೇಕು. ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿರಸಬೇಕು. ತೋಟಗಾರಿಕೆ ಬೆಳೆಗಳನ್ನು ಮಳೆಗೆ ಹಾನಿಯಾಗದಂತೆ ಸೂಕ್ತ ರೀತಿಯಲ್ಲಿ ಸಂರಕ್ಷಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

    ಕೆರೆ-ಕಟ್ಟೆಗಳ ಏರಿ/ಬಂಡ್/ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದ್ದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816-2213400, 155304ನ್ನು ಸಂಪರ್ಕಿಸಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ

    December 10, 2025

    ತುಮಕೂರು| ಉರ್ದು ಶಾಲೆ: ಸ್ವಂತ ಕಟ್ಟಡವೂ ಇಲ್ಲ, ಬಾಡಿಗೆಯೂ ಪಾವತಿಸಿಲ್ಲ

    December 9, 2025

    ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ: ಕುಮಾರಸ್ವಾಮಿ ಹೇಳಿಕೆಗೆ ಸಿಪಿಎಂ ಖಂಡನೆ

    December 9, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಕೊರಟಗೆರೆ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿಳಂಬದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ…

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.