ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗಿನಿಂದಲೇ ಮತ್ತೆ ಮಳೆ ಆರಂಭಗೊಂಡಿದ್ದು, ಮಡಿಕೇರಿ ನಗರ ಸೇರಿದಂತೆ ಬಹುತೇಕ ಎಲ್ಲೆಡೆ ಬಿರುಸಿನಿಂದ ಸುರಿಯುತ್ತಿದೆ. ಮಡಿಕೇರಿ ನಗರದಲ್ಲಿ ದಟ್ಟ ಮಂಜಿನೊಂದಿಗೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಸಿದ್ದಾಪುರ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಿಸಿದೆ. ಗುಹ್ಯ ಗ್ರಾಮದ ಕಕ್ಕಟ್ಟುಕಾಡು ವಿಗೆ ತೆರಳುವ ರಸ್ತೆ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ. ಕರಡಿಗೋಡು ಗ್ರಾಮಕ್ಕೆ ತೆರಳುವ ರಸ್ತೆಯೂ ಜಲಾವೃತಗೊಂಡಿದೆ.
ಕರಡಿಗೋಡು ನದಿ ದಡದ 24 ಕುಟುಂಬಗಳ 76 ಮಂದಿಯನ್ನು ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಹಚ್ಚಿನಾಡು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ಆರಂಭಿಸಿದ್ದು, 10 ಕುಟುಂಬದ 44 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿ ಅಧಿಕಾರಿಗಳು ಠಿಕಾಣಿ ಹೂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296